Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:28 - ಪರಿಶುದ್ದ ಬೈಬಲ್‌

28 ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸತ್ತವರಿಗಾಗಿ ಸಂತಾಪ ಸೂಚಿಸಲು ದೇಹವನ್ನು ಗಾಯಗೊಳಿಸಿಕೊಳ್ಳಬೇಡ. ಶರೀರದ ಮೇಲೆ ಹಚ್ಚೇಚುಚ್ಚಿಸಿಕೊಳ್ಳಬೇಡ. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ ‘ಸತ್ತವರಿಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು. ನಿಮ್ಮ ಮೇಲೆ ಯಾವ ಹಚ್ಚೆಗಳನ್ನೂ ಹಚ್ಚಿಸಿಕೊಳ್ಳಬಾರದು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:28
18 ತಿಳಿವುಗಳ ಹೋಲಿಕೆ  

“ನೀವು ನಿಮ್ಮ ದೇವರಾದ ಯೆಹೋವನ ಮಕ್ಕಳು. ನಿಮ್ಮಲ್ಲಿ ಯಾರಾದರೂ ಸತ್ತರೆ ನೀವು ತಲೆಬೋಳಿಸಿಕೊಂಡಾಗಲಿ ನಿಮ್ಮನ್ನು ಕತ್ತರಿಸಿಕೊಂಡಾಗಲಿ ನಿಮ್ಮ ದುಃಖವನ್ನು ಪ್ರದರ್ಶಿಸಕೂಡದು.


ಪ್ರವಾದಿಗಳು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿದರು. ಅವರು ಖಡ್ಗ ಮತ್ತು ಬರ್ಜಿಗಳಿಂದ ತಮ್ಮನ್ನು ತಾವೇ ತಿವಿದುಕೊಂಡರು. (ಅವರು ಆರಾಧಿಸುವ ರೀತಿಯೇ ಇದು.) ರಕ್ತವು ತಮ್ಮ ದೇಹದ ಮೇಲೆ ಚಿಮ್ಮುವತನಕ ಅವರು ತಮ್ಮನ್ನು ತಾವು ತಿವಿದುಕೊಂಡರು.


“ಯಾಜಕರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳಬಾರದು; ತಮ್ಮ ಗಡ್ಡದ ಪಾರ್ಶ್ವಗಳನ್ನು ಕತ್ತರಿಸಿ ವಿಕಾರಗೊಳಿಸಬಾರದು; ತಮ್ಮ ದೇಹಗಳಲ್ಲಿ ಯಾವ ಗಾಯ ಮಾಡಿಕೊಳ್ಳಬಾರದು.


“ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.


ಅವನು ಹಗಲಿರುಳು ಸಮಾಧಿಯ ಗವಿಗಳ ಸುತ್ತಲು ಮತ್ತು ಬೆಟ್ಟಗಳ ಮೇಲೆ ನಡೆದಾಡುತ್ತಿದ್ದನು. ಅವನು ಕಿರುಚುತ್ತಾ ತನ್ನನ್ನು ಕಲ್ಲುಗಳಿಂದ ಜಜ್ಜಿಕೊಳ್ಳುತ್ತಿದ್ದನು.


ಪ್ರತಿಯೊಬ್ಬರ ತಲೆಯನ್ನು ಬೋಳಿಸಲಾಗಿದೆ. ಪ್ರತಿಯೊಬ್ಬರ ಗಡ್ಡವನ್ನು ಕತ್ತರಿಸಲಾಗಿದೆ. ಪ್ರತಿಯೊಬ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಬ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನ್ನು ಸುತ್ತಿಕೊಂಡಿದ್ದಾರೆ.


ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.


ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು.


ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.”


ಮೂರನೆಯ ದೇವದೂತನು ಮೊದಲ ಇಬ್ಬರು ದೇವದೂತರನ್ನು ಹಿಂಬಾಲಿಸಿದನು. ಈ ಮೂರನೆಯ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ ಹೀಗೆ ಹೇಳಿದನು: “ಮೃಗವನ್ನೂ ಮೃಗದ ವಿಗ್ರಹವನ್ನೂ ಆರಾಧಿಸುವವನಿಗೆ ಮತ್ತು ಮೃಗದ ಗುರುತನ್ನು ಹಣೆಯ ಮೇಲಾಗಲಿ ಇಲ್ಲವೆ ತನ್ನ ಕೈಗಳ ಮೇಲಾಗಲಿ ಹಾಕಿಸಿಕೊಳ್ಳುವವನಿಗೆ ಕೇಡಾಗುವುದು.


ಉಳಿದ ಶಿಷ್ಯರು ತೋಮನಿಗೆ, “ನಾವು ಪ್ರಭುವನ್ನು ನೋಡಿದೆವು” ಎಂದು ಹೇಳಿದರು. ಆದರೆ ತೋಮನು, “ಆತನ ಕೈಗಳಲ್ಲಿರುವ ಮೊಳೆಯ ಗಾಯದ ಗುರುತುಗಳನ್ನು ನಾನು ನೋಡುವವರೆಗೆ, ಮೊಳೆಗಳನ್ನು ಜಡಿದಿದ್ದ ಸ್ಥಳದಲ್ಲಿ ನನ್ನ ಬೆರಳನ್ನಿಡುವವರೆಗೆ ಮತ್ತು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟುನೋಡುವವರೆಗೆ ನಾನು ಅದನ್ನು ನಂಬುವುದಿಲ್ಲ” ಎಂದು ಹೇಳಿದನು.


“ನಿಮ್ಮ ಮುಖದ ಪಾರ್ಶ್ವದಲ್ಲಿ ಬೆಳೆಯುವ ಕೂದಲನ್ನು ನೀವು ಕತ್ತರಿಸಬಾರದು. ನಿಮ್ಮ ಮುಖದ ಪಾರ್ಶ್ವದಲ್ಲಿರುವ ಗಡ್ಡವನ್ನು ಕತ್ತರಿಸಿಕೊಳ್ಳುವುದರ ಮೂಲಕ ನೀವು ನಿಮ್ಮ ಗಡ್ಡವನ್ನು ವಿಕಾರ ಮಾಡಿಕೊಳ್ಳಬಾರದು.


“ಮಗಳನ್ನು ಸೂಳೆಯನ್ನಾಗಿ ಮಾಡಬಾರದು. ಇದರಿಂದ ಸೂಳೆಗಾರಿಕೆ ಹೆಚ್ಚಾಗುತ್ತದೆ. ನಿಮ್ಮ ದೇಶದಲ್ಲಿ ಸೂಳೆಗಾರಿಕೆ ಇರದಂತೆ ನೋಡಿಕೊಳ್ಳಿರಿ. ಇಂಥ ಪಾಪದಿಂದ ನಿಮ್ಮ ದೇಶವು ತುಂಬಿಹೋಗಲು ಬಿಡಬೇಡಿರಿ.


ಅವನು ಹೆಣವನ್ನು ಮುಟ್ಟಿ ತನ್ನನ್ನು ಅಶುದ್ಧನನ್ನಾಗಿ ಮಾಡಿಕೊಳ್ಳಬಾರದು. ಅದು ಅವನ ತಂದೆಯ ಶವವಾಗಿದ್ದರೂ ಸರಿ, ಅಥವಾ ತಾಯಿಯ ಶವವಾಗಿದ್ದರೂ ಸರಿ, ಅವನು ಅದರ ಬಳಿಗೆ ಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು