ಯಾಜಕಕಾಂಡ 19:30 - ಪರಿಶುದ್ದ ಬೈಬಲ್30 “ನೀವು ನನ್ನ ಸಬ್ಬತ್ ದಿನಗಳನ್ನು ಅನುಸರಿಸಬೇಕು. ನನ್ನ ವಿಶ್ರಾಂತಿಯ ವಿಶೇಷ ದಿನಗಳಲ್ಲಿ ನೀವು ಕೆಲಸ ಮಾಡಬಾರದು. ನೀವು ನನ್ನ ಪವಿತ್ರಸ್ಥಳವನ್ನು ಗೌರವಿಸಬೇಕು. ನಾನೇ ಯೆಹೋವನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನನ್ನ ಆಲಯದ ಬಗ್ಗೆ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!