ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
“ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.”
ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.
ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”
ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು.
ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು.
ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.
ಯೋಷೀಯನು ಮಾಂತ್ರಿಕರನ್ನು, ತಾಂತ್ರಿಕರನ್ನು, ಮನೆಯ ದೇವರುಗಳನ್ನು, ವಿಗ್ರಹಗಳನ್ನು, ಯೆಹೂದದಲ್ಲಿ ಮತ್ತು ಜೆರುಸಲೇಮಿನಲ್ಲಿ ಜನರು ಪೂಜಿಸುತ್ತಿದ್ದ ತೆರಾಫೀಮ್ ಎಂಬ ಗೊಂಬೆಗಳನ್ನು ನಾಶಪಡಿಸಿದನು. ಯಾಜಕನಾದ ಹಿಲ್ಕೀಯನಿಗೆ ದೇವಾಲಯದಲ್ಲಿ ಸಿಕ್ಕಿದ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳಿಗೆ ವಿಧೇಯನಾಗಿರಲು ಯೋಷೀಯನು ಹೀಗೆ ಮಾಡಿದನು.