ಯಾಜಕಕಾಂಡ 19:5 - ಪರಿಶುದ್ದ ಬೈಬಲ್5 “ನೀವು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ, ನೀವು ಅಂಗೀಕೃತರಾಗುವಂತೆ ಅವುಗಳನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಶಾಂತಿಸಮಾಧಾನದ ಬಲಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸುವಾಗ ಅವರಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ ‘ನೀವು ನಿಮ್ಮ ಯೆಹೋವ ದೇವರಿಗೆ ಸಮಾಧಾನದ ಬಲಿಯನ್ನು ಸಮರ್ಪಿಸುವುದಾದರೆ, ನೀವು ಆತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿಯೇ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.