Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:1 - ಪರಿಶುದ್ದ ಬೈಬಲ್‌

1 “ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:1
31 ತಿಳಿವುಗಳ ಹೋಲಿಕೆ  

ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.


ಅವರು ನಿಮ್ಮ ಸಹೋದರಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರಸಹೋದರಿಯರಾದ ಇಸ್ರೇಲರು ಬರುವರು.


ಆರೋನನು ಧಾನ್ಯನೈವೇದ್ಯವನ್ನು ಯಜ್ಞವೇದಿಕೆಯ ಬಳಿಗೆ ತಂದನು. ಅವನು ಒಂದು ಹಿಡಿ ಧಾನ್ಯವನ್ನು ತೆಗೆದುಕೊಂಡು ದಿನಂಪ್ರತಿ ಹೊತ್ತಾರೆಯ ವೇಳೆಯಲ್ಲಿ ಅರ್ಪಿಸುವ ಯಜ್ಞವಲ್ಲದೆ ಇದನ್ನೂ ಕೂಡ ಅರ್ಪಿಸಿದನು.


ಆದರೆ ಪ್ರಿಯ ಸ್ನೇಹಿತರೇ, ನೀವು ನಿಮ್ಮ ಅತಿಪರಿಶುದ್ಧ ನಂಬಿಕೆಯ ಮೂಲಕ ದೃಢವಾಗಿರಿ. ಪವಿತ್ರಾತ್ಮಭರಿತರಾಗಿ ಪ್ರಾರ್ಥಿಸಿರಿ.


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.


ಅದಕ್ಕೆ ಯೇಸು, “ನಾನೇ ಜೀವಕೊಡುವ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗದು. ನನ್ನಲ್ಲಿ ನಂಬಿಕೆ ಇಡುವವನಿಗೆ ಎಂದಿಗೂ ಬಾಯಾರಿಕೆಯಾಗದು.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಬಳಿಕ ಹುಳಿಯಿಲ್ಲದ ರೊಟ್ಟಿಯನ್ನೂ ಆಲಿವ್ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ತೆಳುವಾದ ಕಡುಬುಗಳನ್ನೂ ಗೋಧಿಹಿಟ್ಟಿನಿಂದ ಮಾಡಿಸಿ ಒಂದೇ ಬುಟ್ಟಿಯಲ್ಲಿ ತುಂಬಿಸಬೇಕು.


ಯಾಜಕರೇ, ಯೆಹೋವನ ಸೇವಕರೇ, ಗೋಳಾಡಿರಿ. ಯಾಕೆಂದರೆ ಇನ್ನು ಮುಂದೆ ಯೆಹೋವನ ಆಲಯದಲ್ಲಿ ಪಾನ ಮತ್ತು ಧಾನ್ಯಾರ್ಪಣೆ ಇರದು.


“ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.


“ತರುವಾಯ ಲೇವಿಯರು ಸರ್ವಾಂಗಹೋಮಕ್ಕಾಗಿ ಒಂದು ಎಳೆಹೋರಿಯನ್ನು ಮತ್ತು ಅದರೊಡನೆ ಸಮರ್ಪಿಸಬೇಕಾದ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಯಹಿಟ್ಟನ್ನು ತೆಗೆದುಕೊಂಡು ಬರಬೇಕು; ನೀನು ಅವರಿಂದ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಎಳೆಹೋರಿಯನ್ನು ತೆಗೆದುಕೊಳ್ಳಬೇಕು.


ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ.


ಹೊತ್ತಾರೆಯ ಸಮರ್ಪಣೆಯೊಂದಿಗೆ ನೀವು ಧಾನ್ಯಸಮರ್ಪಣೆಗಾಗಿ ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋಧಿಹಿಟ್ಟನ್ನೂ ಬೆರೆಸಿ ಸಮರ್ಪಿಸಬೇಕು.”


ಅಲ್ಲದೆ ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.


ನಿನ್ನ ಕುರಿಗಳನ್ನು ನನ್ನ ಬಳಿಗೆ ಯಜ್ಞಮಾಡುವದಕ್ಕಾಗಿ ತರಲಿಲ್ಲ. ನೀನು ನನ್ನನ್ನು ಸನ್ಮಾನಿಸಲಿಲ್ಲ. ನೀನು ನನಗೆ ಬಲಿಯರ್ಪಣೆ ಮಾಡಲಿಲ್ಲ. ನೀನು ಬಲಿಯರ್ಪಣೆ ಮಾಡಬೇಕೆಂದು ನಾನು ನಿನ್ನನ್ನು ಬಲವಂತಪಡಿಸಲಿಲ್ಲ. ನೀನು ಆಯಾಸಗೊಳ್ಳುವ ತನಕ ಧೂಪಹಾಕಬೇಕೆಂದು ನಾನು ನಿನ್ನನ್ನು ಒತ್ತಾಯಪಡಿಸಲಿಲ್ಲ.


ಬಳಿಕ ಯಾಜಕನು ಯೆಹೋವನ ಸನ್ನಿಧಿಗೆ ಹೋಗಿ ಅವನನ್ನು ಶುದ್ಧಿಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.”


ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊಂಡು ಎಣ್ಣೆ ಬೆರೆಸಿದ ಧಾನ್ಯಸಮರ್ಪಣೆಗಳೊಡನೆ ಅವುಗಳನ್ನು ಯೆಹೋವನ ಮುಂದೆ ಅರ್ಪಿಸಿರಿ. ಯಾಕೆಂದರೆ ಈ ದಿನ ಯೆಹೋವನು ನಿಮಗೆ ಪ್ರತ್ಯಕ್ಷವಾಗುವನು.’”


“ಎಂಟನೆಯ ದಿನದಲ್ಲಿ ಅವನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ಒಂದು ವರ್ಷದ ಹೆಣ್ಣು ಕುರಿಮರಿಯನ್ನೂ ಎಣ್ಣೆ ಬೆರೆಸಿದ ಇಪ್ಪತ್ತನಾಲ್ಕು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನೂ ತೆಗೆದುಕೊಂಡು ಬರಬೇಕು. ಈ ಶ್ರೇಷ್ಠ ಗೋಧಿಹಿಟ್ಟು ಧಾನ್ಯನೈವೇದ್ಯಕ್ಕಾಗಿರುತ್ತದೆ. ಅವನು ಒಂದು ಸೇರು ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಪ್ರತಿ ಸಾಲಿನಲ್ಲಿ ಶುದ್ಧವಾದ ಧೂಪದ್ರವ್ಯವನ್ನಿಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಸಮರ್ಪಣೆಯನ್ನು ಯೆಹೋವನ ಜ್ಞಾಪಕಕ್ಕೆ ತರುವುದು.


ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು