16 ಯಾಜಕನು ಜಜ್ಜಿದ ಧಾನ್ಯದಲ್ಲಿ ಒಂದು ಭಾಗವನ್ನೂ ಎಣ್ಣೆಯನ್ನೂ ಎಲ್ಲಾ ಧೂಪವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿದೆ.
16 ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.
16 ಯಾಜಕನು ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಆ ಗೋದಿ ತೆನೆಯಿಂದಲೂ, ಎಣ್ಣೆಯಿಂದಲೂ ಸ್ವಲ್ಪ ಭಾಗವನ್ನು ತೆಗೆದುಕೊಂಡು ಸಾಂಬ್ರಾಣಿಯನ್ನೆಲ್ಲ ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಸರ್ವೇಶ್ವರನಿಗೆ ಹೋಮಮಾಡಲಿ.
16 ಯಾಜಕನು ನೈವೇದ್ಯವನ್ನು ಸೂಚಿಸುವದಕ್ಕಾಗಿ ಆ ಉವ್ಮಿುಗೆಯಲ್ಲಿಯೂ ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.
ಬಳಿಕ ಯಾಜಕನು ಧಾನ್ಯನೈವೇದ್ಯದ ಸ್ವಲ್ಪ ಭಾಗವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.
ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.