ಯಾಜಕಕಾಂಡ 2:9 - ಪರಿಶುದ್ದ ಬೈಬಲ್9 ಬಳಿಕ ಯಾಜಕನು ಧಾನ್ಯನೈವೇದ್ಯದ ಸ್ವಲ್ಪ ಭಾಗವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಾಜಕನು ನೈವೇದ್ಯವನ್ನು ಸೂಚಿಸುವದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು. ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”