Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:1 - ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:1
7 ತಿಳಿವುಗಳ ಹೋಲಿಕೆ  

“ನೀವು ನನ್ನ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಜ್ಞಾಪಕಮಾಡಿಕೊಳ್ಳಬೇಕು; ಅವುಗಳಿಗೆ ವಿಧೇಯರಾಗಬೇಕು. ನಾನೇ ಯೆಹೋವನು.”


“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು. ನಿಮ್ಮ ದೇಶದಲ್ಲಿರುವ ಒಬ್ಬನು ತನ್ನ ಮಕ್ಕಳಲ್ಲಿ ಒಬ್ಬನನ್ನು ಸುಳ್ಳು ದೇವರಾದ ಮೊಲೆಕನಿಗೆ ಅರ್ಪಿಸಿದರೆ ಅವನನ್ನು ಕೊಲ್ಲಬೇಕು. ಅವನು ಸ್ವದೇಶಸ್ಥನಾದರೂ ಇಸ್ರೇಲರಲ್ಲಿ ವಾಸಿಸುವ ಪರದೇಶಸ್ಥನಾದರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ನಿರಂತರವಾಗಿ ರಕ್ಷಿಸುತ್ತಾನೆ. ಆದರೆ ನೀವು ಈ ಕಾರ್ಯಗಳನ್ನು ಮಾಡಿದರೆ ಮಾತ್ರ ದೇವರು ನಿಮ್ಮನ್ನು ರಕ್ಷಿಸುತ್ತಾನೆ: ನೀವು ಯೆಹೋವನನ್ನು ಗೌರವಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನ ಆಜ್ಞೆಗಳನ್ನು ವಿರೋಧಿಸಬಾರದು. ನಿಮ್ಮ ದೇವರಾದ ಯೆಹೋವನ ಮಾರ್ಗವನ್ನು ನೀವು ಮತ್ತು ನಿಮ್ಮನ್ನು ಆಳುವ ರಾಜನು ಅನುಸರಿಸಬೇಕು. ನೀವು ಈ ಕಾರ್ಯಗಳನ್ನು ಮಾಡಿದಾಗ ದೇವರು ನಿಮ್ಮನ್ನು ರಕ್ಷಿಸುತ್ತಾನೆ.


ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು.


ಯೆಹೂದದ ಜನರು ಬೆನ್‌ಹಿನ್ನೊಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ.


ನೀನು ನನ್ನ ಗಂಡುಮಕ್ಕಳನ್ನು ಸಂಹರಿಸಿ ಬೆಂಕಿಯಲ್ಲಿ ದಾಟಿಸಿ ಆ ಸುಳ್ಳುದೇವರಿಗೆ ಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು