Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:11 - ಪರಿಶುದ್ದ ಬೈಬಲ್‌

11 ಒಬ್ಬನು ತನ್ನ ತಂದೆಯ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವನಿಗೂ ಆಕೆಗೂ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆಗೆ ಅವಮಾನ ಮಾಡಿದ್ದಾನೆ. ಅವರು ತಮ್ಮ ಮರಣಕ್ಕೆ ತಾವೇ ಜವಾಬ್ದಾರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯಾವನಾದರು ಮಲತಾಯಿಯನ್ನು ಕೂಡಿದರೆ ಅವನು ತಂದೆಗೆ ಮಾನಭಂಗ ಮಾಡಿದಂತಾಯಿತು. ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಆ ಶಿಕ್ಷೆಗೆ ಅವರೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾವನಾದರೂ ಮಲತಾಯಿಯನ್ನು ಕೂಡಿದರೆ ಅವನು ತಂದೆಗೇ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಗೆ ಮಾನಭಂಗ ಮಾಡಿದಂತೆ. ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:11
7 ತಿಳಿವುಗಳ ಹೋಲಿಕೆ  

“ಲೇವಿಯರು, ‘ತನ್ನ ಅತ್ತೆಯೊಡನೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


“ಲೇವಿಯರು, ‘ತಂದೆಯ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡವನು ಶಾಪಗ್ರಸ್ತನಾಗಲಿ. ಅವನು ತನ್ನ ತಂದೆಗೆ ಅವಮಾನ ಮಾಡಿದನು’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.


ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು.


“ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಕೂಡಿ ತಂದೆಗೆ ಅವಮಾನ ಮಾಡಬಾರದು.”


“ನೀವು ಎಂದಿಗೂ ನಿಮ್ಮ ಹತ್ತಿರದ ಸಂಬಂಧಿಗಳೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ನಾನೇ ಯೆಹೋವನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು