ಯಾಜಕಕಾಂಡ 20:12 - ಪರಿಶುದ್ದ ಬೈಬಲ್12 “ಒಬ್ಬನು ತನ್ನ ಸೊಸೆಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವರಿಬ್ಬರೂ ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ. ಅವರು ಬಹಳ ಕೆಟ್ಟದಾದ ಲೈಂಗಿಕ ಪಾಪವನ್ನು ಮಾಡಿದವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯಾವನಾದರು ಸೊಸೆಯನ್ನು ಸಂಭೋಗಿಸಿದರೆ ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಅವರು ಅಧರ್ಮ ಕಾರ್ಯವನ್ನು ಮಾಡಿದ್ದರಿಂದ ಆ ಶಿಕ್ಷೆಗೆ ಅವರೇ ಕಾರಣರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾವನಾದರೂ ಸೊಸೆಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿದದರಿಂದ ಆ ಶಿಕ್ಷೆಗೆ ಅವರೇ ಕಾರಣರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ ‘ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ, ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರು ವಿಕೃತವನ್ನು ಮಾಡಿದ್ದಾರೆ, ಅವರ ಪಾಪವು ಅವರ ಮೇಲೆ ಇರುವುದು. ಅಧ್ಯಾಯವನ್ನು ನೋಡಿ |
ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.