Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:13 - ಪರಿಶುದ್ದ ಬೈಬಲ್‌

13 “ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಈ ಇಬ್ಬರೂ ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯಾವನಾದರು ಸ್ತ್ರೀಯನ್ನು ಸಂಭೋಗಿಸುವಂತೆ ಪುರುಷನನ್ನು ಸಂಭೋಗಿಸಿದರೆ ಅವರಿಬ್ಬರೂ ಹೇಸಿಗೆಯ ಕೃತ್ಯ ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾವನಾದರೂ ಸ್ತ್ರೀಯನ್ನು ಸಂಗವಿುಸುವಂತೆ ಪುರುಷನನ್ನು ಸಂಗವಿುಸಿದರೆ ಅವರಿಬ್ಬರೂ ಹೇಸಿಗೆಯ ಕೆಲಸವನ್ನು ಮಾಡಿದದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:13
9 ತಿಳಿವುಗಳ ಹೋಲಿಕೆ  

ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


“ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು. ಅದು ಭಯಂಕರ ಪಾಪ!


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ಸೊದೋಮ್ ಮತ್ತು ಗೊಮೋರ ನಗರಗಳನ್ನೂ ಅವುಗಳ ಸುತ್ತಲಿನ ಪಟ್ಟಣಗಳನ್ನೂ ನೆನಪು ಮಾಡಿಕೊಳ್ಳಿರಿ. ಅವುಗಳೂ ಆ ದೇವದೂತರಂತಾದವು. ಆ ಪಟ್ಟಣಗಳಲ್ಲಿ ಲೈಂಗಿಕ ಪಾಪಗಳು ಮತ್ತು ಕೆಟ್ಟಕಾರ್ಯಗಳು ತುಂಬಿಕೊಂಡಿದ್ದವು. ಅವರು ನಿತ್ಯವಾದ ಬೆಂಕಿಯ ದಂಡನೆಯಿಂದ ಸಂಕಟಪಡುವರು. ಅವರಿಗೆ ನೀಡಿದ ದಂಡನೆಯು ನಮಗೊಂದು ದೃಷ್ಟಾಂತವಾಗಿದೆ.


“ಇಸ್ರೇಲರ ಗಂಡಸಾಗಲಿ ಹೆಂಗಸಾಗಲಿ ದೇವಸ್ಥಾನದ ವೇಶ್ಯೆಯಾಗಬಾರದು.


“ನಿನ್ನ ಮನೆಗೆ ಬಂದ ಆ ಇಬ್ಬರು ಪುರುಷರು ಎಲ್ಲಿದ್ದಾರೆ? ಅವರನ್ನು ಹೊರಗೆ ಕಳುಹಿಸು. ನಾವು ಅವರನ್ನು ಸಂಭೋಗಿಸಬೇಕು” ಎಂದು ಕೂಗಿ ಹೇಳಿದರು.


ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು.


ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು