Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:24 - ಪರಿಶುದ್ದ ಬೈಬಲ್‌

24 ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆ. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:24
17 ತಿಳಿವುಗಳ ಹೋಲಿಕೆ  

ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.


ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’” ಎಂದು ಹೇಳಿದನು.


ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.


ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕೆಂದರೆ ನಾನು ಯೆಹೋವನು ಮತ್ತು ನಾನು ಪರಿಶುದ್ಧನಾಗಿದ್ದೇನೆ.


ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಭೂಲೋಕದ ಎಲ್ಲಾ ಜನರೊಳಗಿಂದ ಅವರನ್ನು ನೀನು ನಿನ್ನ ವಿಶೇಷವಾದ ಸ್ವಂತ ಜನರೆಂದು ಆರಿಸಿರುವೆ. ಯೆಹೋವನೇ, ನಮ್ಮ ಪೂರ್ವಿಕರನ್ನು ನೀನು ಈಜಿಪ್ಟಿನಿಂದ ಬರಮಾಡಿದಾಗ ನಿನ್ನ ಸೇವಕನಾದ ಮೋಶೆಯ ಮೂಲಕ ಅದನ್ನು ವಾಗ್ದಾನ ಮಾಡಿದೆ.”


ಬೆಟ್ಟದ ಶಿಖರದಿಂದ ಅವರನ್ನು ನಾನು ನೋಡಿದೆನು; ಗುಡ್ಡದಿಂದ ಅವರನ್ನು ಕಂಡೆನು. ಅವರು ತಮ್ಮನ್ನು ಇತರ ಜನಾಂಗಗಳಿಗಿಂತ ಬೇರೆಯಾದವರು ಎಂದು ಪರಿಗಣಿಸಿಕೊಂಡಿದ್ದಾರೆ.


ಆದ್ದರಿಂದ ಸಮೃದ್ಧಿಕರವಾದ ಆ ದೇಶಕ್ಕೆ ಹೋಗಿರಿ. ಆದರೆ ನಾನು ನಿಮ್ಮೊಂದಿಗೆ ಬರುವುದಿಲ್ಲ. ನೀವು ನನ್ನ ಆಜ್ಞೆಗೆ ವಿಧೇಯರಾಗದೆ ನನ್ನನ್ನು ಕೋಪಗೊಳಿಸುತ್ತೀರಿ. ನಾನು ನಿಮ್ಮೊಂದಿಗೆ ಬಂದರೆ, ದಾರಿಯಲ್ಲಿ ನಿಮ್ಮನ್ನು ಸಂಹರಿಸುವೆನು” ಎಂದು ಹೇಳಿದನು.


ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.


“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”


ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಈ ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ಆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ.


“ನಾನು ನಿಮ್ಮ ಜನರಿಗೆ ಕಾನಾನ್ ದೇಶವನ್ನು ಕೊಡುತ್ತಿದ್ದೇನೆ. ನಿಮ್ಮ ಜನರು ಆ ದೇಶದಲ್ಲಿ ಪ್ರವೇಶಿಸಿ ನೆಲೆಸುವರು. ಆಗ ಯಾರ ಮನೆಯಲ್ಲಾದರೂ ಬೂಷ್ಟು ಉಂಟಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು