ಯಾಜಕಕಾಂಡ 20:25 - ಪರಿಶುದ್ದ ಬೈಬಲ್25 ಆದ್ದರಿಂದ ಶುದ್ಧವಾದ ಪ್ರಾಣಿಗಳನ್ನು ಅಶುದ್ಧವಾದ ಪ್ರಾಣಿಗಳಿಗಿಂತ ಭಿನ್ನವಾಗಿ ಕಾಣಬೇಕು. ನೀವು ಶುದ್ಧವಾದ ಪಕ್ಷಿಗಳನ್ನು ಅಶುದ್ಧವಾದ ಪಕ್ಷಿಗಳಿಗಿಂತ ಭಿನ್ನವಾಗಿ ಕಾಣಬೇಕು. ಆ ಅಶುದ್ಧವಾದ ಪಕ್ಷಿಗಳಲ್ಲಿ, ಪ್ರಾಣಿಗಳಲ್ಲಿ ಮತ್ತು ನೆಲದ ಮೇಲೆ ಹರಿದಾಡುವ ಪ್ರಾಣಿಗಳಲ್ಲಿ ಯಾವುದನ್ನೂ ತಿನ್ನಬೇಡಿರಿ. ನಾನು ಅವುಗಳನ್ನು ಅಶುದ್ಧವಾಗಿ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನೀವು ಶುದ್ಧಾಶುದ್ಧ ಜಂತುಗಳನ್ನು ಪಕ್ಷಿಗಳನ್ನು ವಿವೇಚನೆಮಾಡಿ ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪ್ರಾಣಿಪಕ್ಷಿ ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಹೇಯಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀವು ಶುದ್ಧಾಶುದ್ಧ ಜಂತುಗಳನ್ನೂ ಪಕ್ಷಿಗಳನ್ನೂ ವಿವೇಚನೆಮಾಡಿ ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶುಪಕ್ಷಿ ಕ್ರಿವಿುಕೀಟಗಳಿಂದಲೂ ನಿಮ್ಮನ್ನು ಹೇಯಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ ‘ಆದ್ದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ, ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಇಲ್ಲವೆ ಪಕ್ಷಿಗಳಿಂದಲೂ ಇಲ್ಲವೆ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮ ಪ್ರಾಣಗಳನ್ನು ಅಶುದ್ಧಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿ |