Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:3 - ಪರಿಶುದ್ದ ಬೈಬಲ್‌

3 ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿ ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತಂದಿದ್ದಾನೆ. ಆದ್ದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ನನ್ನ ಜನತೆಯಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:3
16 ತಿಳಿವುಗಳ ಹೋಲಿಕೆ  

“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.


“ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.


ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.”


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


“ಅಶುದ್ಧನಾಗಿದ್ದರೂ ತನ್ನನ್ನು ಶುದ್ಧಮಾಡಿಕೊಳ್ಳದವನು ಯೆಹೋವನ ಗುಡಾರವನ್ನು ಅಶುದ್ಧಮಾಡಿದವನಾಗಿರುತ್ತಾನೆ. ಆದ್ದರಿಂದ ಅವನನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧಪಡಿಸಿಕೊಳ್ಳುವ ನೀರನ್ನು ಚಿಮಿಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.


“ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು.”


ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.”


ಒಂದುವೇಳೆ ದೇಶದ ಜನರು ಅವನು ಮಾಡಿದ ಕಾರ್ಯವನ್ನು ನಿರ್ಲಕ್ಷಿಸಿ ಅವನನ್ನು ಕೊಲ್ಲದಿದ್ದರೆ,


ಒಬ್ಬನು ಮನುಷ್ಯನ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ಆ ವ್ಯಕ್ತಿಯನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚಿಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು.


ಯಾವನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ಆದರೆ ಒಬ್ಬನು ಅಶುದ್ಧನಾಗಿದ್ದು ಯೆಹೋವನಿಗೆ ಸೇರಿದ ಸಮಾಧಾನ ಸಮರ್ಪಣೆಗಳ ಮಾಂಸವನ್ನು ತಿಂದರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.


“ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”


ನೀವು ನನ್ನ ಹೆಸರನ್ನು ಉಪಯೋಗಿಸಿ ಸುಳ್ಳಾಣೆ ಇಟ್ಟುಕೊಳ್ಳಬಾರದು; ಇಲ್ಲವಾದರೆ ನೀವು ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸುವಿರಿ; ನಾನೇ ನಿಮ್ಮ ದೇವರಾದ ಯೆಹೋವನು!


ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು