ಯಾಜಕಕಾಂಡ 20:6 - ಪರಿಶುದ್ದ ಬೈಬಲ್6 “ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿ |
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.