ಯಾಜಕಕಾಂಡ 21:10 - ಪರಿಶುದ್ದ ಬೈಬಲ್10 “ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯಾಜಕರಲ್ಲಿ ಪ್ರಧಾನನು, ಅಂದರೆ ಯಾವನು ತೈಲಾಭಿಷೇಕ ಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ಸಂತಾಪ ಸೂಚನೆಗಾಗಿ ತನ್ನ ತಲೆಗೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾಜಕರಲ್ಲಿ ಪ್ರಧಾನನು ಅಂದರೆ ಯಾವನು ತೈಲಾಭಿಷೇಕಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ ಪಟ್ಟಕ್ಕೆ ಬರುವನೋ ಅವನು [ದುಃಖಸೂಚನೆಗಾಗಿ] ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ತನ್ನ ಸಹೋದರರೊಳಗೆ ಮಹಾಯಾಜಕನಾಗಿದ್ದು, ಯಾವನು ತೈಲಾಭಿಷೇಕ ಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ, ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು, ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು. ಅಧ್ಯಾಯವನ್ನು ನೋಡಿ |