Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:11 - ಪರಿಶುದ್ದ ಬೈಬಲ್‌

11 ಅವನು ಹೆಣವನ್ನು ಮುಟ್ಟಿ ತನ್ನನ್ನು ಅಶುದ್ಧನನ್ನಾಗಿ ಮಾಡಿಕೊಳ್ಳಬಾರದು. ಅದು ಅವನ ತಂದೆಯ ಶವವಾಗಿದ್ದರೂ ಸರಿ, ಅಥವಾ ತಾಯಿಯ ಶವವಾಗಿದ್ದರೂ ಸರಿ, ಅವನು ಅದರ ಬಳಿಗೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆ ತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿವಿುತ್ತ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾವ ಮೃತ ಶರೀರದ ಬಳಿಗೂ ಹೋಗಬಾರದು, ಅವನು ತನ್ನ ತಂದೆತಾಯಿಗಳ ಮರಣದ ನಿಮಿತ್ತ, ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:11
11 ತಿಳಿವುಗಳ ಹೋಲಿಕೆ  

“ಯಾವನಾದರೂ ಗುಡಾರದಲ್ಲಿ ಸತ್ತರೆ ಅನುಸರಿಸಬೇಕಾದ ನಿಯಮವಿದು: ಒಬ್ಬನು ಗುಡಾರದಲ್ಲಿ ಸತ್ತರೆ, ಆ ಗುಡಾರವನ್ನು ಪ್ರವೇಶಿಸುವ ಪ್ರತಿಯೊಬ್ಬನು ಮತ್ತು ಆ ಗುಡಾರದಲ್ಲಿರುವ ಪ್ರತಿಯೊಬ್ಬನು ಅಶುದ್ಧನಾಗುವನು. ಅವರು ಏಳು ದಿನಗಳವರೆಗೆ ಅಶುದ್ಧರಾಗಿರುವರು.


ಅವನ ತಂದೆ, ತಾಯಿ, ಸಹೋದರ, ಸಹೋದರಿ ಸತ್ತರೂ ಅವನು ಅವರ ಹೆಣವನ್ನು ಮುಟ್ಟಬಾರದು. ಮುಟ್ಟಿದರೆ ಅವನು ಅಶುದ್ಧನಾಗುವನು. ದೇವರಿಗೋಸ್ಕರ ಮೀಸಲಾಗಿರುವ ಅವನ ಕೂದಲು ಅವನ ತಲೆಯನ್ನು ಮುಚ್ಚಿಕೊಂಡಿರುತ್ತದೆ; ಆದ್ದರಿಂದ ಅವನು ಪರಿಶುದ್ಧನಾಗಿರಬೇಕು.


ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು!


ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.


“ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.


ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.


ಯಾವನಾದರೂ ಮನುಷ್ಯನ ಶವವನ್ನು ಮುಟ್ಟಿದರೆ, ಏಳು ದಿನಗಳವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು