Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:18 - ಪರಿಶುದ್ದ ಬೈಬಲ್‌

18 ಯಾವ ಅಂಗವಿಕಲನೂ ಯಾಜಕನಾಗಿ ಸೇವೆಮಾಡಬಾರದು; ನನಗೆ ಯಜ್ಞಗಳನ್ನು ಅರ್ಪಿಸಬಾರದು. ಯಾಜಕರಾಗಿ ಸೇವೆ ಮಾಡಬಾರದವರು ಯಾರೆಂದರೆ: ಕುರುಡರು, ಕುಂಟರು, ತಮ್ಮ ಮುಖಗಳಲ್ಲಿ ಕೆಟ್ಟದಾದ ಗಾಯದ ಗುರುತುಗಳುಳ್ಳವರು, ಬಹಳ ಉದ್ದವಾದ ಕೈಕಾಲುಗಳುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನು ಕುರುಡನಾಗಲಿ, ಕುಂಟನಾಗಲಿ, ಕೊರೆಮೂಗನಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಕುರುಡನಾಗಲಿ ಕುಂಟನಾಗಲಿ ಕೊರೆಮೂಗನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಊನಗೊಂಡ ಮನುಷ್ಯನು ಸಮೀಪಕ್ಕೆ ಬರಬಾರದು. ಎಂದರೆ, ಕಣ್ಣಿಲ್ಲದವನು, ಕುಂಟನು, ಕುರೂಪವುಳ್ಳವನು, ಅಂಗವಿಕಲನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:18
9 ತಿಳಿವುಗಳ ಹೋಲಿಕೆ  

ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.


ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.


ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ.


ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು.


ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.


ಮುರಿದ ಕೈಕಾಲುಗಳುಳ್ಳವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು