Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:21 - ಪರಿಶುದ್ದ ಬೈಬಲ್‌

21 “ಆರೋನನ ಸಂತತಿಯವರಲ್ಲಿ ಅಂಗವಿಕಲರಾದ ಯಾರೂ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸಬಾರದು; ಅಂಥವನು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಸರ್ವೇಶ್ವರನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬೀಜದೋಷವುಳ್ಳವನಾಗಲಿ ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯಾಜಕನಾದ ಆರೋನನ ಸಂತತಿಯಲ್ಲಿ ನ್ಯೂನತೆವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಬರಬಾರದು. ನ್ಯೂನತೆವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವುದಕ್ಕಾಗಿ ಸಮೀಪ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:21
4 ತಿಳಿವುಗಳ ಹೋಲಿಕೆ  

ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.


“ಆರೋನನಿಗೆ ಹೀಗೆ ಹೇಳು: ನಿನ್ನ ಸಂತತಿಯವರ ಮಕ್ಕಳಲ್ಲಿ ಯಾರಾದರೂ ಅಂಗವಿಕಲರಾಗಿದ್ದರೆ, ಅವರು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಬಾರದು.


ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.


ಧಾನ್ಯಸಮರ್ಪಣೆಯಲ್ಲಿ ಉಳಿದ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿವೆ. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ಸಮರ್ಪಣೆಯು ಮಹಾಪರಿಶುದ್ಧವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು