ಯಾಜಕಕಾಂಡ 21:23 - ಪರಿಶುದ್ದ ಬೈಬಲ್23 ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನಿಗೆ ಕಳಂಕವಿರುವದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ” ಅಧ್ಯಾಯವನ್ನು ನೋಡಿ |