Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:6 - ಪರಿಶುದ್ದ ಬೈಬಲ್‌

6 ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವದರಿಂದ ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:6
20 ತಿಳಿವುಗಳ ಹೋಲಿಕೆ  

“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


ಅದು ಯೆಹೋವನಿಗೆ ಬೆಂಕಿಯ ಮೂಲಕ ಅರ್ಪಿಸಿದ ಆಹಾರವಾಗುವುದು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ಆ ಹನ್ನೆರಡು ಮಂದಿ ಯಾಜಕರಿಗೆ ನಾನು ಹೇಳಿದ್ದೇನೆಂದರೆ, “ನೀವು ಮತ್ತು ಈ ವಸ್ತುಗಳು ಯೆಹೋವನಿಗೆ ಪರಿಶುದ್ಧವಾದವುಗಳಾಗಿವೆ. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಜನರು ಕಾಣಿಕೆ ಕೊಟ್ಟರು.


ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.


ನೀವು ನನ್ನ ಹೆಸರನ್ನು ಉಪಯೋಗಿಸಿ ಸುಳ್ಳಾಣೆ ಇಟ್ಟುಕೊಳ್ಳಬಾರದು; ಇಲ್ಲವಾದರೆ ನೀವು ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸುವಿರಿ; ನಾನೇ ನಿಮ್ಮ ದೇವರಾದ ಯೆಹೋವನು!


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.


“ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆಮಾಡಲು ಶಕ್ತರಾಗುವರು.


“ಶುದ್ಧಬಂಗಾರದ ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ “ಯೆಹೋವನಿಗೆ ಮೀಸಲು” ಎಂಬ ಮಾತುಗಳನ್ನು ಚಿನ್ನದಲ್ಲಿ ಕೆತ್ತಿಸಬೇಕು.


ಮಾತ್ರವಲ್ಲದೆ ನನ್ನ ಸಮೀಪಕ್ಕೆ ಬರುವ ಯಾಜಕರು ಈ ವಿಶೇಷ ಸಂದರ್ಶನಕ್ಕಾಗಿ ತಮ್ಮನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಹೇಳು. ಇಲ್ಲವಾದರೆ ನಾನು ಅವರನ್ನೂ ಶಿಕ್ಷಿಸುವೆನು” ಅಂದನು.


“ಆರೋನನಿಗೆ ಹೀಗೆ ಹೇಳು: ನಿನ್ನ ಸಂತತಿಯವರ ಮಕ್ಕಳಲ್ಲಿ ಯಾರಾದರೂ ಅಂಗವಿಕಲರಾಗಿದ್ದರೆ, ಅವರು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಬಾರದು.


“ಆರೋನನ ಸಂತತಿಯವರಲ್ಲಿ ಅಂಗವಿಕಲರಾದ ಯಾರೂ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸಬಾರದು; ಅಂಥವನು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಕೂಡದು.


ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.


ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.”


ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ತನ್ನವನೆಂದು ಮತ್ತು ಪವಿತ್ರನೆಂದು ಯೆಹೋವನು ತೋರಿಸುವನು. ತಾನು ಆರಿಸಿಕೊಂಡವನನ್ನು ಯೆಹೋವನು ತನ್ನ ಹತ್ತಿರ ಬರಮಾಡಿಕೊಳ್ಳುವನು.


“ನೀನು ಇಸ್ರೇಲರಿಗೆ ಈ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು