ಯಾಜಕಕಾಂಡ 21:7 - ಪರಿಶುದ್ದ ಬೈಬಲ್7 “ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ಯಾಜಕನು ಬೇರೆಯವರೊಡನೆ ಲೈಂಗಿಕ ಸಂಬಂಧಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಯಾಜಕನು ವೇಶ್ಯೆಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಮದುವೆಯಾಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯಾಜಕರು ತಮ್ಮ ದೇವರಿಗೆ ಮೀಸಲಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾಜಕರು ತಮ್ಮ ದೇವರಿಗೆ ಮೀಸಲಾದವರಾಗಿರುವದರಿಂದ ವೇಶ್ಯಾ ಸ್ತ್ರೀಯನ್ನಾಗಲಿ ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ ‘ಯಾಜಕರು ತಮ್ಮ ದೇವರಿಗೆ ಪರಿಶುದ್ಧರಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಠ ಸ್ತ್ರೀಯನ್ನಾಗಲಿ, ಗಂಡನಿಂದ ವಿಚ್ಛೇದನ ಪಡೆದವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.