Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:10 - ಪರಿಶುದ್ದ ಬೈಬಲ್‌

10 ಯಾಜಕರ ಕುಟುಂಬದ ಜನರು ಮಾತ್ರವೇ ನೈವೇದ್ಯ ಪದಾರ್ಥಗಳನ್ನು ತಿನ್ನಬಹುದು. ಯಾಜಕನೊಂದಿಗೆ ಇಳಿದುಕೊಂಡವನಾಗಲಿ ಕೂಲಿಯಾಳಾಗಲಿ ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಯಾಜಕನಲ್ಲದವನು ನೈವೇದ್ಯಪದಾರ್ಥಗಳನ್ನು ಊಟಮಾಡಕೂಡದು. ಅಂತೆಯೇ ಯಾಜಕನ ಅತಿಥಿಯಾಗಲಿ, ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಜಕನಲ್ಲದ ಇತರನು ನೈವೇದ್ಯ ಪದಾರ್ಥವನ್ನು ಊಟಮಾಡಕೂಡದು. ಯಾಜಕನ ಬಳಿಯಲ್ಲಿ ಇಳುಕೊಂಡವನಾಗಲಿ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಅತಿಥಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:10
11 ತಿಳಿವುಗಳ ಹೋಲಿಕೆ  

ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಅಲ್ಲಿ ಪವಿತ್ರ ರೊಟ್ಟಿಯ ಹೊರತು ಬೇರೆ ರೊಟ್ಟಿಯು ಇರಲಿಲ್ಲ. ಆದ್ದರಿಂದ ಯಾಜಕನು ಆ ರೊಟ್ಟಿಯನ್ನು ದಾವೀದನಿಗೆ ಕೊಟ್ಟನು. ಯಾಜಕರು ಯೆಹೋವನ ಸನ್ನಿಧಿಯಲ್ಲಿ ಪವಿತ್ರ ಮೇಜಿನ ಮೇಲಿಟ್ಟಿದ್ದ ರೊಟ್ಟಿಯೇ ಅದಾಗಿತ್ತು. ಈ ರೊಟ್ಟಿಯನ್ನು ಪ್ರತಿದಿನವೂ ಹೊರ ತೆಗೆಯುತ್ತಿದ್ದರು ಮತ್ತು ಹೊಸ ರೊಟ್ಟಿಯನ್ನು ಆ ಸ್ಥಳದಲ್ಲಿ ಇಡುತ್ತಿದ್ದರು.


ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ.


ಆದರೆ ನಿಮ್ಮ ದೇಶದಲ್ಲಿ ಕೇವಲ ವಾಸವಾಗಿರುವವರಾಗಲಿ ಕೂಲಿಯಾಳಾಗಲಿ ಪಸ್ಕಹಬ್ಬದ ಊಟ ಮಾಡಬಾರದು.


ಯಾಜಕನ ಮಗಳು ವಿಧವೆಯಾಗಿದ್ದರೆ ಅಥವಾ ಗಂಡ ಬಿಟ್ಟವಳಾಗಿದ್ದರೆ ಅಲ್ಲದೆ ಅವಳಿಗೆ ಆಧಾರ ನೀಡುವಂಥ ಮಕ್ಕಳೂ ಇಲ್ಲದಿದ್ದರೆ ಮತ್ತು ಅವಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದರೆ, ಆಗ ಅವಳು ತಂದೆಯ ಆಹಾರದಲ್ಲಿ ಸ್ವಲ್ಪ ತಿನ್ನಬಹುದು. ಆದರೆ ಯಾಜಕನ ಕುಟುಂಬದವರು ಮಾತ್ರವೇ ಈ ಆಹಾರವನ್ನು ತಿನ್ನಬಹುದು.


“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”


ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು.


ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.


ಸೌಲನ ಅಧಿಕಾರಿಗಳಲ್ಲಿ ಒಬ್ಬನು ಆ ದಿನ ಅಲ್ಲಿದ್ದನು. ಅವನು ದೋಯೇಗನೆಂಬ ಎದೋಮ್ಯನು. ದೋಯೇಗನನ್ನು ಯೆಹೋವನ ಸನ್ನಿಧಿಯಲ್ಲಿ ಇಟ್ಟಿದ್ದರು. ಸೌಲನ ಕುರಿಗಳನ್ನು ಕಾಯುವವರಿಗೆ ದೋಯೇಗನು ನಾಯಕನಾಗಿದ್ದನು.


ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.


ನೀವು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿದಿರಿ. ನನ್ನ ಪವಿತ್ರಸ್ಥಳದ ಜವಾಬ್ದಾರಿಕೆಯನ್ನು ನೀವು ಅನ್ಯರ ವಶಮಾಡಿದ್ದೀರಿ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು