ಯಾಜಕಕಾಂಡ 22:11 - ಪರಿಶುದ್ದ ಬೈಬಲ್11 ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೆ ಯಾಜಕನು ಕೊಂಡುಕೊಂಡ ಗುಲಾಮರು, ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ದಾಸರೂ ಅವನ ಮನೆಯಲ್ಲಿ ಹುಟ್ಟಿದ ದಾಸರೂ ಅದನ್ನು ಊಟಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ, ಅವನು ಅದರಲ್ಲಿ ತಿನ್ನಬಹುದು. ಅವನ ಮನೆಯಲ್ಲಿ ಹುಟ್ಟಿದವನು ಅದನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿ |
ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.