13 ಯಾಜಕನ ಮಗಳು ವಿಧವೆಯಾಗಿದ್ದರೆ ಅಥವಾ ಗಂಡ ಬಿಟ್ಟವಳಾಗಿದ್ದರೆ ಅಲ್ಲದೆ ಅವಳಿಗೆ ಆಧಾರ ನೀಡುವಂಥ ಮಕ್ಕಳೂ ಇಲ್ಲದಿದ್ದರೆ ಮತ್ತು ಅವಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದರೆ, ಆಗ ಅವಳು ತಂದೆಯ ಆಹಾರದಲ್ಲಿ ಸ್ವಲ್ಪ ತಿನ್ನಬಹುದು. ಆದರೆ ಯಾಜಕನ ಕುಟುಂಬದವರು ಮಾತ್ರವೇ ಈ ಆಹಾರವನ್ನು ತಿನ್ನಬಹುದು.
13 ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.
13 ಯಾಜಕನ ಮಗಳು ವಿಧವೆಯಾಗಿದ್ದರೆ, ಗಂಡಬಿಟ್ಟವಳಾಗಿದ್ದರೆ, ಮಕ್ಕಳಿಲ್ಲದೆ ಇದ್ದರೆ, ಬಾಲ್ಯದಲ್ಲಿ ತಂದೆಯ ಬಳಿ ಇದ್ದಂತೆಯೇ ಮತ್ತೆ ತಂದೆಯ ಮನೆ ಸೇರಿದ್ದರೆ ಆಕೆ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.
13 ಯಾಜಕನ ಮಗಳು ವಿಧವೆಯಾಗಿಯಾಗಲಿ ಗಂಡನಿಂದ ಬಿಡಲ್ಪಟ್ಟವಳಾಗಿಯಾಗಲಿ ಮಕ್ಕಳಿಲ್ಲದ ಪಕ್ಷಕ್ಕೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ತಿರಿಗಿ ತಂದೆಯ ಮನೆ ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಉಣ್ಣಲೇಬಾರದು.
13 ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು.
“ಮಾತ್ರವಲ್ಲದೆ ನೀನು, ನಿನ್ನ ಪುತ್ರರು ಮತ್ತು ನಿನ್ನ ಹೆಣ್ಣುಮಕ್ಕಳು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನು ಮತ್ತು ಅರ್ಪಿಸಲ್ಪಟ್ಟ ತೊಡೆಯನ್ನು ತಿನ್ನಬೇಕು. ನೀವು ಅವುಗಳನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿಲ್ಲ. ಆದರೆ ನೀವು ಅವುಗಳನ್ನು ಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಯಾಕೆಂದರೆ ಅವುಗಳು ಸಮಾಧಾನಯಜ್ಞಗಳಿಂದ ಬಂದವುಗಳಾಗಿವೆ. ಇಸ್ರೇಲರು ಆ ಕಾಣಿಕೆಗಳನ್ನು ದೇವರಿಗಾಗಿ ಕೊಡುತ್ತಾರೆ. ಜನರು ಆ ಪಶುಗಳಲ್ಲಿ ಕೆಲವು ಭಾಗಗಳನ್ನು ತಿನ್ನುತ್ತಾರೆ. ಆದರೆ ಎದೆಯ ಭಾಗವು ನಿಮ್ಮ ಪಾಲಾಗಿರುತ್ತದೆ.
ಆಗ ಯೆಹೂದನು ತನ್ನ ಸೊಸೆಯಾದ ತಾಮಾರಳಿಗೆ, “ನಿನ್ನ ತಂದೆಯ ಮನೆಗೆ ಹಿಂತಿರುಗಿ ಹೋಗಿ ಅಲ್ಲಿರು. ನನ್ನ ಮಗನಾದ ಶೇಲಹನು ದೊಡ್ಡವನಾಗುವ ತನಕ ಮದುವೆಯಾಗಬೇಡ” ಎಂದು ಹೇಳಿದನು. ಶೇಲಹನು ಸಹ ತನ್ನ ಅಣ್ಣಂದಿರಂತೆ ಸಾಯಬಹುದೆಂದು ಯೆಹೂದನು ಹೆದರಿಕೊಂಡಿದ್ದನು. ಆದ್ದರಿಂದ ತಾಮಾರಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದಳು.
ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ.
ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.