ಯಾಜಕಕಾಂಡ 22:15 - ಪರಿಶುದ್ದ ಬೈಬಲ್15 “ಇಸ್ರೇಲರು ಯೆಹೋವನಿಗೆ ಕೊಡುವ ಕಾಣಿಕೆಗಳು ಪರಿಶುದ್ಧವಾಗಿವೆ. ಆದ್ದರಿಂದ ಯಾಜಕರು ಆ ಪರಿಶುದ್ಧ ವಸ್ತುಗಳನ್ನು ಅಶುದ್ಧಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಸ್ರಯೇಲರ ಸರ್ವೇಶ್ವರನಿಗೆ ಮೀಸಲೆಂದು ಇಟ್ಟ ನೈವೇದ್ಯಪದಾರ್ಥಗಳನ್ನು ಸಾಧಾರಣವೆಂದು ಅಸಡ್ಡೆಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲ್ಯರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯಪದಾರ್ಥಗಳನ್ನು [ಯಾಜಕರು] ಸಾಧಾರಣವೆಂದೆಣಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಸ್ರಾಯೇಲರು ಯೆಹೋವ ದೇವರಿಗೆ ಅರ್ಪಿಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು. ಅಧ್ಯಾಯವನ್ನು ನೋಡಿ |
“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.
ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”