Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:18 - ಪರಿಶುದ್ದ ಬೈಬಲ್‌

18 “ಆರೋನನಿಗೆ, ಅವನ ಪುತ್ರರಿಗೆ ಮತ್ತು ಇಸ್ರೇಲರೆಲ್ಲರಿಗೆ ಹೀಗೆ ಹೇಳು: ಒಂದುವೇಳೆ ಇಸ್ರೇಲನಾಗಲಿ ಅಥವಾ ಪರದೇಶಸ್ಥನಾಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವಾಂಗಹೋಮ ಮಾಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಇಸ್ರಯೇಲರೇ ಆಗಲಿ, ಅವರ ನಡುವೆ ವಾಸಿಸುವವರೇ ಆಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವೇಶ್ವರನಾದ ನನಗೆ ದಹನ ಬಲಿದಾನ ಮಾಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ಆರೋನನಿಗೂ ಅವನ ಮಕ್ಕಳಿಗೂ ಇಸ್ರಾಯೇಲ್ಯರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಿ ಆಗಲಿ ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮಮಾಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದದ್ದು ಇದೇ, ‘ಇಸ್ರಾಯೇಲ್ ಮನೆತನದವರಲ್ಲಿಯಾಗಲಿ, ಇಸ್ರಾಯೇಲರಾದ ಪರಕೀಯರಲ್ಲಿಯಾಗಲಿ ಯಾರಾದರೂ ತಮ್ಮ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಯೆಹೋವ ದೇವರಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:18
29 ತಿಳಿವುಗಳ ಹೋಲಿಕೆ  

ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.


ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ನಿಮ್ಮ ಮಂದೆಯಿಂದಾಗಲಿ ಹಿಂಡಿನಿಂದಾಗಲಿ ಅಗ್ನಿಯ ಮೂಲಕ ಯಜ್ಞವನ್ನರ್ಪಿಸುವವನು ಸರ್ವಾಂಗಹೋಮ ಮಾಡಿದರೂ ಅಥವಾ ಸಮಾಧಾನಯಜ್ಞಮಾಡಿದರೂ ಹರಕೆಯ ಯಜ್ಞಮಾಡಿದರೂ ಅಥವಾ ಸ್ವಇಚ್ಛೆಯಿಂದ ಯಜ್ಞಮಾಡಿದರೂ ನಿಯಮಿತ ಹಬ್ಬಗಳಲ್ಲಿ ಯಜ್ಞಮಾಡಿದರೂ


“ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು.


ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು. ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”


ಜನರು ಇದನ್ನು ನೋಡಿದಾಗ ಅವರು ಯೆಹೋವನಿಗೆ ಭಯಪಟ್ಟು ಗೌರವಿಸಿದರು. ಅವರು ಆತನಿಗೆ ಯಜ್ಞವನ್ನರ್ಪಿಸಿ ಹರಕೆ ಹಾಕಿಕೊಂಡರು.


ನೀವು ಹರಕೆ ಮಾಡಿಕೊಂಡರೆ ತಡಮಾಡದೆ ಅದನ್ನು ನೆರವೇರಿಸಿ. ಮೂಢರ ವಿಷಯದಲ್ಲಿ ದೇವರಿಗೆ ಸಂತೋಷವಿಲ್ಲ. ನೀವು ದೇವರಿಗೆ ಹರಕೆ ಮಾಡಿಕೊಂಡದ್ದನ್ನು ಸಲ್ಲಿಸಿರಿ.


ನನ್ನ ಹರಕೆಗಳನ್ನು ಯೆಹೋವನಿಗೆ ಜನರ ಮುಂದೆ ಸಲ್ಲಿಸುವೆನು.


ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು ಜನರ ಮುಂದೆ ಆತನಿಗೆ ಸಲ್ಲಿಸುವೆನು.


ಆದ್ದರಿಂದ ನಾನು ನಿನ್ನ ಆಲಯಕ್ಕೆ ಬಂದು ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ದೇವರೇ, ಚೀಯೋನಿನಲ್ಲಿ ನಾವು ನಿನ್ನನ್ನು ಸ್ತುತಿಸುವೆವು. ನಾವು ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆವು.


ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು.


ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ.


ದೇವರೇ, ನಾನು ನಿನಗೆ ವಿಶೇಷ ಹರಕೆಗಳನ್ನು ಮಾಡಿದ್ದೇನೆ. ನಾನು ಮಾಡಿದ ಹರಕೆಗಳನ್ನು ಸಲ್ಲಿಸುವೆನು. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು.


ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ.


“ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.


ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.


“ಯಾವನಾದರೂ ಒಂದು ಪ್ರಾಣಿಯನ್ನು ಬೇಟೆಯಾಡಿದರೆ ಅಥವಾ ಪಕ್ಷಿಯನ್ನು ಹಿಡಿದರೆ, ಅವನು ಅದರ ರಕ್ತವನ್ನು ನೆಲದ ಮೇಲೆ ಸುರಿದು ಅದನ್ನು ಮಣ್ಣಿನಿಂದ ಮುಚ್ಚಿಬಿಡಬೇಕು. ಅವನು ಇಸ್ರೇಲನಾದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾದರೂ ಹಾಗೆಯೇ ಮಾಡಬೇಕು.


“ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.


“ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲಿ ಹರಕೆಯನ್ನು ಸಲ್ಲಿಸುವುದಕ್ಕಾಗಲಿ ಸಮಾಧಾನಯಜ್ಞ ಅರ್ಪಿಸಬಹುದು ಅಥವಾ ಆ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು.


“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.


ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು.


ಯೆಹೋವನು ಮೋಶೆಗೆ ಹೀಗೆಂದನು:


ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ.


ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು