Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:2 - ಪರಿಶುದ್ದ ಬೈಬಲ್‌

2 “ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳು: ಇಸ್ರೇಲರು ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವು ಪರಿಶುದ್ಧವಾದವುಗಳು. ಅವು ನನ್ನವು, ಆದ್ದರಿಂದ ಯಾಜಕರಾದ ನೀವು ಅವುಗಳನ್ನು ತೆಗೆದುಕೊಳ್ಳಬಾರದು. ನೀವು ಆ ಪರಿಶುದ್ಧ ವಸ್ತುಗಳನ್ನು ಉಪಯೋಗಿಸಿದರೆ, ನನ್ನ ಪರಿಶುದ್ಧ ಹೆಸರಿಗೆ ಅವಮಾನವಾಗುವುದು. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆರೋನನೂ ಮತ್ತು ಅವನ ಮಕ್ಕಳೂ ತಾವು ಅಶುದ್ಧರಾಗಿರುವಾಗ ಇಸ್ರಾಯೇಲರಿಂದ ನನಗೆ ಸಮರ್ಪಿಸಲ್ಪಟ್ಟ ಪರಿಶುದ್ಧ ದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಆರೋನನು ಮತ್ತು ಅವನ ಮಕ್ಕಳು ತಾವು ಅಶುದ್ಧರಾಗಿರುವಾಗ ಇಸ್ರಯೇಲರಿಂದ ನನಗೆ ಸಮರ್ಪಿತವಾದ ಪರಿಶುದ್ಧ ಪದಾರ್ಥಗಳನ್ನು ಮುಟ್ಟಬಾರದೆಂದು ಆಜ್ಞಾಪಿಸು. ಅವರು ನನ್ನ ಪವಿತ್ರನಾಮದ ಘನತೆಗೆ ಕುಂದುತರಬಾರದು. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆರೋನನೂ ಅವನ ಮಕ್ಕಳೂ [ತಾವು ಅಶುದ್ಧರಾಗಿರುವಾಗ] ಇಸ್ರಾಯೇಲ್ಯರಿಂದ ನನಗೆ ಸಮರ್ಪಿಸಲ್ಪಡುವ ಪರಿಶುದ್ಧದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡು, ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡದಂತೆ ಇಸ್ರಾಯೇಲರು ನನಗೆ ಸಲ್ಲಿಸುವ ಪರಿಶುದ್ಧವಾದವುಗಳನ್ನು ಗೌರವದಿಂದ ಅವರು ಪ್ರತ್ಯೇಕವಾಗಿರಿಸಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:2
16 ತಿಳಿವುಗಳ ಹೋಲಿಕೆ  

“ನಿಮ್ಮ ಹಿಂಡಿನಲ್ಲಾಗಲಿ ಹಟ್ಟಿಯಲ್ಲಾಗಲಿ ಚೊಚ್ಚಲ ಮರಿಗಳು ನನಗೆ ವಿಶೇಷವಾದವುಗಳು. ನೀವು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಂಥಾ ಪ್ರಾಣಿಗಳನ್ನು ನಿಮ್ಮ ಕೆಲಸಕಾರ್ಯಗಳಿಗಾಗಿ ಉಪಯೋಗಿಸಕೂಡದು. ಮತ್ತು ಅಂಥಾ ಕುರಿಮರಿಗಳ ಉಣ್ಣೆಯನ್ನು ಕತ್ತರಿಸಬಾರದು.


“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇಸ್ರೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.”


ನನ್ನ ಪವಿತ್ರ ನಾಮವನ್ನು ಗೌರವಿಸಬೇಕು. ನಾನು ಇಸ್ರೇಲರಿಗೆ ಬಹಳ ವಿಶೇಷವಾದವನಾಗಿರಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.


ನೀವು ನನ್ನ ಹೆಸರನ್ನು ಉಪಯೋಗಿಸಿ ಸುಳ್ಳಾಣೆ ಇಟ್ಟುಕೊಳ್ಳಬಾರದು; ಇಲ್ಲವಾದರೆ ನೀವು ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸುವಿರಿ; ನಾನೇ ನಿಮ್ಮ ದೇವರಾದ ಯೆಹೋವನು!


ಆರೋನನು ಇದನ್ನು ತನ್ನ ಹಣೆಯ ಮೇಲೆ ಧರಿಸಿಕೊಳ್ಳುವನು. ಹೀಗೆ, ಇಸ್ರೇಲರು ಅರ್ಪಿಸಿದ ಕಾಣಿಕೆಗಳಲ್ಲಿ ದೋಷವೇನಾದರೂ ಇದ್ದರೆ ಅವನು ಅದನ್ನು ತನ್ನ ಮೇಲೆ ತೆಗೆದುಕೊಂಡು ತಾನೇ ಅದನ್ನು ವಹಿಸಿಕೊಳ್ಳುವನು. ಇವು ಜನರು ಯೆಹೋವನಿಗೆ ಸಮರ್ಪಿಸುವ ಕಾಣಿಕೆಗಳಾಗಿವೆ. ಜನರ ಕಾಣಿಕೆಗಳನ್ನು ಯೆಹೋವನು ಅಂಗೀಕರಿಸುವಂತೆ ಆರೋನನು ಇದನ್ನು ಯಾವಾಗಲೂ ತನ್ನ ಶಿರದಲ್ಲಿ ಧರಿಸಿಕೊಂಡಿರುವನು.


ನೀವು ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಆತನಿಗಾಗಿ ಮೀಸಲಿಡಬೇಕು.


ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.


ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.


“ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು.”


ದೇವರಾದ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಆ ಹನ್ನೆರಡು ಮಂದಿ ಯಾಜಕರಿಗೆ ನಾನು ಹೇಳಿದ್ದೇನೆಂದರೆ, “ನೀವು ಮತ್ತು ಈ ವಸ್ತುಗಳು ಯೆಹೋವನಿಗೆ ಪರಿಶುದ್ಧವಾದವುಗಳಾಗಿವೆ. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಜನರು ಕಾಣಿಕೆ ಕೊಟ್ಟರು.


ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ನೀವು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿದಿರಿ. ನನ್ನ ಪವಿತ್ರಸ್ಥಳದ ಜವಾಬ್ದಾರಿಕೆಯನ್ನು ನೀವು ಅನ್ಯರ ವಶಮಾಡಿದ್ದೀರಿ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು