ಯಾಜಕಕಾಂಡ 22:21 - ಪರಿಶುದ್ದ ಬೈಬಲ್21 “ಒಬ್ಬನು ಸಮಾಧಾನಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲಿ ಟಗರನ್ನಾಗಲಿ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹರಕೆಯಾಗಿ ಅಥವಾ ಕಾಣಿಕೆಯಾಗಿ ಯಾರಾದರು ಶಾಂತಿಸಮಾಧಾನದ ಬಲಿಯನ್ನರ್ಪಿಸಲು ಆಶಿಸಿದರೆ ಅವರು ತರುವ ದನಕರುಗಳು, ಆಡು ಕುರಿಗಳು ಕಳಂಕರಹಿತವಾಗಿರಬೇಕು. ಯಾವುದಾದರೂ ಕುಂದುಕೊರತೆ ಇದ್ದರೆ ಆ ಬಲಿದಾನ ಸ್ವೀಕೃತವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿಯಾಗಲಿ ಕಾಣಿಕೆಯಾಗಿಯಾಗಲಿ ದನವನ್ನು ಅಥವಾ ಆಡುಕುರಿಗಳನ್ನು ತಂದರೆ ಅವು ಸಮರ್ಪಕವಾಗುವದಕ್ಕೆ ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ತಮ್ಮ ಪ್ರಮಾಣವನ್ನು ಪೂರೈಸುವ ಹಾಗೆ ಯಾರಾದರೂ ಸಮಾಧಾನದ ಬಲಿಯನ್ನಾಗಲಿ, ಪಶುಗಳನ್ನಾಗಲಿ, ಕುರಿಗಳನ್ನಾಗಲಿ ಉಚಿತವಾದ ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಾದರೆ, ಅದು ಅಂಗೀಕಾರಕ್ಕೆ ಪರಿಪೂರ್ಣವುಳ್ಳದ್ದಾಗಿರಬೇಕು. ಅದರೊಳಗೆ ಯಾವ ದೋಷವೂ ಕಳಂಕವೂ ಇರಬಾರದು. ಅಧ್ಯಾಯವನ್ನು ನೋಡಿ |