Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:29 - ಪರಿಶುದ್ದ ಬೈಬಲ್‌

29 “ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನೀವು ಧನ್ಯವಾದ ಸಲ್ಲಿಸಲು ಸರ್ವೇಶ್ವರನಿಗೆ ಮಾಡುವ ಬಲಿದಾನವನ್ನು ಮೆಚ್ಚುಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವು ಕೃತಜ್ಞತೆಯನ್ನು ತೋರಿಸುವದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು, ಯೆಹೋವ ದೇವರಿಗೆ ಮಾಡುವ ಬಲಿದಾನವನ್ನು ಮೆಚ್ಚಿಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:29
9 ತಿಳಿವುಗಳ ಹೋಲಿಕೆ  

ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.


ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ.


ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.


ನೀವು ಇಡೀ ಪಶುವನ್ನು ಅದೇ ದಿನದಲ್ಲಿ ತಿನ್ನಬೇಕು. ಮರುದಿನ ಮುಂಜಾನೆಯವರೆಗೆ ಮಾಂಸದಲ್ಲಿ ಸ್ವಲ್ಪವನ್ನೂ ಉಳಿಸಬಾರದು. ನಾನೇ ಯೆಹೋವನು!


“ಸಮಾಧಾನಯಜ್ಞದ ಕಟ್ಟಳೆಗಳು ಇಂತಿವೆ: ಯಾರಾದರೂ ಯೆಹೋವನಿಗೆ ಕೃತಜ್ಞತೆಯಿಂದ ಸಮಾಧಾನಯಜ್ಞಗಳನ್ನು ಅರ್ಪಿಸಬೇಕೆಂದಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು