Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:5 - ಪರಿಶುದ್ದ ಬೈಬಲ್‌

5 ಯಾವುದೇ ಅಶುದ್ಧವಾದ ಹರಿದಾಡುವ ಜಂತುಗಳನ್ನು ಮುಟ್ಟಿದರೆ, ಅಶುದ್ಧನಾದ ವ್ಯಕ್ತಿಯನ್ನು ಮುಟ್ಟಿದರೆ ಅಶುದ್ಧನಾಗುವನು. ಯಾವುದು ಅವನನ್ನು ಅಶುದ್ಧಪಡಿಸಿತು ಎಂಬುದು ಪ್ರಾಮುಖ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹರಿದಾಡುವ ಅಶುದ್ಧವಾದ ಕ್ರಿಮಿಕೀಟ ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಶುದ್ಧವಾದ ಕ್ರಿಮಿಕೀಟಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಶುದ್ಧವಾದ ಕ್ರಿವಿುಕೀಟ ಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನಾಗಲಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಲ್ಲವೆ ತನ್ನನ್ನು ಅಶುದ್ಧನಾಗುವಂತೆ ಹರಿದಾಡುವ ಯಾವುದನ್ನಾಗಲಿ ಇಲ್ಲವೆ ಅಶುದ್ಧ ಮನುಷ್ಯನನ್ನಾಗಲಿ ಮುಟ್ಟಿದವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:5
7 ತಿಳಿವುಗಳ ಹೋಲಿಕೆ  

ಅಲ್ಲದೆ ಸ್ರಾವವುಳ್ಳ ವ್ಯಕ್ತಿಯನ್ನು ಯಾವನಾದರೂ ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


“ಸ್ತ್ರೀಗೆ ಅವಳ ತಿಂಗಳ ಮುಟ್ಟಿನಿಂದ ಸ್ರಾವವಿದ್ದರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಯಾವನಾದರೂ ಆಕೆಯನ್ನು ಮುಟ್ಟಿದರೆ, ಆ ವ್ಯಕ್ತಿಯೂ ಸಾಯಂಕಾಲದವರೆಗೆ ಆಶುದ್ಧನಾಗಿರುವನು.


“ಆದರೆ ರೆಕ್ಕೆಗಳಿದ್ದು ನಾಲ್ಕು ಕಾಲುಗಳಿರುವ ಬೇರೆ ಎಲ್ಲಾ ಕ್ರಿಮಿಕೀಟಗಳನ್ನು ನೀವು ತಿನ್ನಬಾರದು.


ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು.


ಅಶುದ್ಧನಾದವನು ಮುಟ್ಟುವುದೆಲ್ಲಾ ಅಶುದ್ಧವಾಗುತ್ತದೆ. ಅಲ್ಲದೆ ಅವನನ್ನು ಮಟ್ಟುವವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು