ಯಾಜಕಕಾಂಡ 23:1 - ಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಯೊಂದಿಗೆ ಮಾತನಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರಿಗೆ ಈ ಪ್ರಕಾರ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |
ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”
ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.