Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:12 - ಪರಿಶುದ್ದ ಬೈಬಲ್‌

12 “ನೀವು ಸಿವುಡನ್ನು ನಿವಾಳಿಸುವ ದಿನದಲ್ಲಿ ಒಂದು ವರ್ಷದ ಗಂಡು ಕುರಿಮರಿಯನ್ನು ಅರ್ಪಿಸಬೇಕು. ಆ ಕುರಿಮರಿಯಲ್ಲಿ ಯಾವ ದೋಷವೂ ಇರಬಾರದು. ಅದು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿತವಾಗುವುದಕ್ಕಾಗಿ ನೇಮಿತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು ಒಂದು ವರ್ಷದ ಕಳಂಕರಹಿತವಾದ ಟಗರನ್ನು ದಹನಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರುಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ಸಿವುಡನ್ನು ಅರ್ಪಿಸುವ ದಿನದಲ್ಲಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂತೆ ಒಂದು ವರ್ಷದ ಮತ್ತು ಕಳಂಕರಹಿತವಾದ ಕುರಿಮರಿಯನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:12
7 ತಿಳಿವುಗಳ ಹೋಲಿಕೆ  

ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.


ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು.


ಯಾಜಕನು ಸಿವುಡನ್ನು ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಆಗ ನೀವು ಸ್ವೀಕೃತರಾಗಲು ಯೋಗ್ಯರಾಗುವಿರಿ. ಸಬ್ಬತ್ತಾದ ನಂತರ ಯಾಜಕನು ಸಿವುಡನ್ನು ಯೆಹೋವನಿಗೆ ನಿವಾಳಿಸುವನು.


ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು