ಯಾಜಕಕಾಂಡ 23:14 - ಪರಿಶುದ್ದ ಬೈಬಲ್14 ನೀವು ಯಾವ ಹೊಸ ಧಾನ್ಯವನ್ನಾಗಲಿ ಹಣ್ಣನ್ನಾಗಲಿ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲಿ ದೇವರಿಗೆ ಅರ್ಪಿಸುವ ಮೊದಲು ತಿನ್ನಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸ ಸ್ಥಾನಗಳಲ್ಲಿಯೂ ಶಾಶ್ವತವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದ ಕಾಣಿಕೆಯನ್ನು ತಂದುಕೊಡುವವರೆಗೆ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ, ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನೀವು ಎಲ್ಲಿದ್ದರೂ ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದುಕೊಡುವವರೆಗೂ [ಆ ವರುಷದ ಬೆಳೆಯ] ರೊಟ್ಟಿಯನ್ನಾಗಲಿ ಸುಟ್ಟ ತೆನೆಗಳನ್ನಾಗಲಿ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು. ಅಧ್ಯಾಯವನ್ನು ನೋಡಿ |
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.