Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:18 - ಪರಿಶುದ್ದ ಬೈಬಲ್‌

18 “ಜನರು ಸಮರ್ಪಿಸುವ ರೊಟ್ಟಿ, ಧಾನ್ಯ ಮತ್ತು ದ್ರಾಕ್ಷಾರಸಗಳೊಂದಿಗೆ ಒಂದು ಹೋರಿ, ಎರಡು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳನ್ನು ಅರ್ಪಿಸಲಾಗುವುದು. ಆ ಪಶುಗಳಲ್ಲಿ ಯಾವ ದೋಷವು ಇರಬಾರದು. ಅವುಗಳು ಯೆಹೋವನಿಗೆ ಅಗ್ನಿಯ ಮೂಲಕ ಅರ್ಪಿತವಾಗಲಿರುವ ಸಮರ್ಪಣೆಗಳಾಗಿವೆ. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ರೊಟ್ಟಿಗಳೊಡನೆ ಒಂದು ವರ್ಷದ ಕಳಂಕರಹಿತವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯನ್ನುಂಟುಮಾಡುವ ದಹನಬಲಿದಾನಗಳಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ರೊಟ್ಟಿಗಳೊಡನೆ ಒಂದು ವರುಷದ ಪೂರ್ಣಾಂಗವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ನೀವು ರೊಟ್ಟಿಯೊಂದಿಗೆ ಕಳಂಕರಹಿತವಾದ ಒಂದು ವರ್ಷದ ಏಳು ಕುರಿಮರಿಗಳನ್ನೂ ಒಂದು ಎಳೆಯ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಅವು ಯೆಹೋವ ದೇವರಿಗೆ ದಹನಬಲಿಗಳಾಗುವುವು. ಅವುಗಳೊಂದಿಗೆ ಆಹಾರ ಬಲಿಯು ಮತ್ತು ಪಾನಾರ್ಪಣೆಗಳು, ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:18
8 ತಿಳಿವುಗಳ ಹೋಲಿಕೆ  

ಅವನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಅರ್ಪಿಸುವ ಯಜ್ಞವೇ ಸಮಾಧಾನಯಜ್ಞವಾಗಿದೆ. ಈ ಯಜ್ಞದೊಡನೆ ಅವನು ಹುಳಿಯಿರುವ ರೊಟ್ಟಿಗಳ ನೈವೇದ್ಯವನ್ನು ಅರ್ಪಿಸಬೇಕು.


ಆ ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ಆ ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೆ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳೆಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು.


ನೀವು ಪಾಪಪರಿಹಾರಕ ಸಮರ್ಪಣೆಯಾಗಿ ಒಂದು ಹೋತವನ್ನೂ ಸಮಾಧಾನಯಜ್ಞವಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಅರ್ಪಿಸಬೇಕು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು