ಯಾಜಕಕಾಂಡ 23:19 - ಪರಿಶುದ್ದ ಬೈಬಲ್19 ನೀವು ಪಾಪಪರಿಹಾರಕ ಸಮರ್ಪಣೆಯಾಗಿ ಒಂದು ಹೋತವನ್ನೂ ಸಮಾಧಾನಯಜ್ಞವಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಲ್ಲದೆ, ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನೂ, ಶಾಂತಿಸಮಾಧನದ ಬಲಿಯಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಸಮಾಧಾನಯಜ್ಞಕ್ಕಾಗಿ ಒಂದು ವರುಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ತರುವಾಯ ಹೋತವನ್ನು ಪಾಪ ಪರಿಹಾರದ ಬಲಿಯಾಗಿಯೂ ಮತ್ತು ಸಮಾಧಾನ ಬಲಿಯಾಗಿ ಒಂದು ವರ್ಷದ ಎರಡು ಕುರಿಮರಿಗಳನ್ನು ಬಲಿಯಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.