Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:2 - ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರನಿಂದ ನೇಮಕಾವಾದ ಹಬ್ಬದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಬೇಕು. ಹಾಗೆ ನೇಮಕವಾದ ಹಬ್ಬದ ದಿನಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂಬದಾಗಿ ಸಾರಬೇಕು. ನಾನು ನೇವಿುಸಿರುವ ಹಬ್ಬದದಿನಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:2
28 ತಿಳಿವುಗಳ ಹೋಲಿಕೆ  

“ಯೆಹೋವನಿಗೆ ವಿಶೇಷ ಹಬ್ಬದ ದಿನಗಳು ಇವುಗಳೇ. ಈ ವಿಶೇಷ ದಿನಗಳಲ್ಲಿ ನೀವು ಪವಿತ್ರಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾಗುವ ಸರ್ವಾಂಗಹೋಮ, ಧಾನ್ಯಸಮರ್ಪಣೆ, ಯಜ್ಞಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಬೇಕು. ನೀವು ಆ ಕಾಣಿಕೆಗಳನ್ನು ಸರಿಯಾದ ಸಮಯದಲ್ಲಿ ಅರ್ಪಿಸಬೇಕು.


“ಇವುಗಳು ಯೆಹೋವನಿಂದ ಆರಿಸಲ್ಪಟ್ಟ ಹಬ್ಬದ ದಿನಗಳು. ಆ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಟಗಳು ನಡೆಸಲ್ಪಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಿಸಬೇಕು.


ಚೀಯೋನಿನಲ್ಲಿ ತುತ್ತೂರಿ ಊದಿರಿ. ವಿಶೇಷ ಕೂಟಕ್ಕಾಗಿ ಜನರನ್ನು ಕೂಡಿಸಿರಿ. ಉಪವಾಸದ ದಿನ ಗೊತ್ತುಮಾಡಿರಿ.


ನಾನು (ದೇವರು) ಆಕೆಯ ಉಲ್ಲಾಸಗಳನ್ನು ಅವಳಿಂದ ತೆಗೆಯುವೆನು. ಆಕೆಯ ಹಬ್ಬದ ದಿನಗಳು, ಅಮಾವಾಸ್ಯೆಯ ಹಬ್ಬ, ಸಬ್ಬತ್ ದಿನಗಳನ್ನು ಆಕೆಯಿಂದ ತೆಗೆದುಬಿಡುವೆನು.


ಅಮಾವಾಸ್ಯೆಯಲ್ಲಿಯೂ ನಮ್ಮ ರಜಾಕಾಲವಾದ ಪೂರ್ಣಿಮೆಯಲ್ಲಿಯೂ ತುತ್ತೂರಿಯನ್ನು ಊದಿರಿ.


“ಮೇಲೆ ತಿಳಿಸಿರುವ ಸಾರ್ವಜನಿಕ ಯಜ್ಞಗಳನ್ನು ಇಡೀ ಸಮುದಾಯಕ್ಕೋಸ್ಕರ ಹಬ್ಬದ ದಿನಗಳಲ್ಲಿ ನಿಮ್ಮ ಸರ್ವಾಂಗಹೋಮಗಳನ್ನಾಗಿಯೂ ಧಾನ್ಯಾರ್ಪಣೆಗಳನ್ನಾಗಿಯೂ ಪಾನದ್ರವ್ಯಾರ್ಪಣೆಗಳನ್ನಾಗಿಯೂ ಮತ್ತು ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಬೇಕು. ನಿಮ್ಮ ವೈಯಕ್ತಿಕ ಹರಕೆಯ ಅರ್ಪಣೆ ಮತ್ತು ಸ್ವಯಿಚ್ಛಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.”


ಇದಲ್ಲದೆ, ನೀವು ಉತ್ಸವಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ನಿಮ್ಮನ್ನು ಗಮನಿಸಬೇಕೆಂದು ಆ ತುತ್ತೂರಿ ಧ್ವನಿಗಳು ನಿಮ್ಮ ದೇವರಿಗೆ ನೆನಪನ್ನುಂಟುಮಾಡುತ್ತವೆ. ನೀವು ಇದನ್ನು ಮಾಡಬೇಕೆಂದು ನಾನು ಆಜ್ಞಾಪಿಸುತ್ತೇನೆ. ನಿಮ್ಮ ದೇವರಾದ ಯೆಹೋವನು ನಾನೇ.”


ತರುವಾಯ ಯೇಸು ಯೆಹೂದ್ಯರ ಒಂದು ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದನು.


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.


ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ. ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ.


ನಮ್ಮ ಹಬ್ಬಗಳನ್ನು ಆಚರಿಸುವ ನಗರವಾದ ಚೀಯೋನನ್ನು ನೋಡಿರಿ. ಮನೋಹರವಾದ ವಿಶ್ರಾಂತಿ ಸ್ಥಳವಾದ ಜೆರುಸಲೇಮನ್ನು ನೋಡಿರಿ. ಜೆರುಸಲೇಮು ಎಂದಿಗೂ ಕದಲದ ಗುಡಾರವಾಗಿದೆ. ಆಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ಗೂಟಗಳು ಎಂದಿಗೂ ಕೀಳಲ್ಪಡುವದಿಲ್ಲ. ಆಕೆಯ ಹಗ್ಗಗಳು ಎಂದಿಗೂ ತುಂಡಾಗುವದಿಲ್ಲ.


ಇದನ್ನು ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣದವರೆಗಿನ ಜನರಿಗೆಲ್ಲಾ ಪ್ರಕಟಿಸಿದರು. ಇಸ್ರೇಲಿನ ದೇವರಾದ ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಲು ಎಲ್ಲರಿಗೂ ಆಹ್ವಾನಿಸಿದರು. ಮೋಶೆಯು ಹೇಳಿದ್ದ ನಿಯಮಕ್ಕನುಸಾರವಾಗಿ ಪಸ್ಕಹಬ್ಬವನ್ನು ಎಷ್ಟೋ ಜನರು ಅನೇಕ ವರ್ಷಗಳಿಂದ ಆಚರಿಸಿರಲಿಲ್ಲ.


ಯೇಹುವು, “ಬಾಳನಿಗೆ ಒಂದು ಪವಿತ್ರ ಸಭೆಯನ್ನು ಸೇರಿಸಿರಿ” ಎಂದು ಹೇಳಿದನು.


ಆದ್ದರಿಂದ ಮೋಶೆಯು ಯೆಹೋವನನ್ನು ಸನ್ಮಾನಿಸುವುದಕ್ಕಾಗಿ ಸೇರಿಬರುವ ವಿಶೇಷ ಸಭೆಗಳ ಕುರಿತು ಜನರಿಗೆ ಹೇಳಿದನು.


ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.


ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.


ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ.


ಹೀಗಿರುವುದರಿಂದ ತಿಂದು ಕುಡಿಯುವುದರ ಬಗ್ಗೆ ಇಲ್ಲವೆ ಯೆಹೂದ್ಯರ ಪದ್ಧತಿಗಳ (ಹಬ್ಬಗಳು, ಅಮಾವಾಸ್ಯೆಯ ಆಚರಣೆಗಳು, ಸಬ್ಬತ್‌ ದಿನಗಳು) ಬಗ್ಗೆ ನಿಮಗೆ ನಿಯಮಗಳನ್ನು ರೂಪಿಸಲು ಯಾರಿಗೂ ಅವಕಾಶ ಕೊಡಬೇಡಿ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಬೇರೆ ವಿಶೇಷ ದಿನಗಳಲ್ಲಿಯೂ ದೇವರಿಗೆ ಸಮರ್ಪಿಸುವ ಸರ್ವಾಂಗಹೋಮವನ್ನು ತಯಾರು ಮಾಡುತ್ತಿದ್ದರು. ಪ್ರತಿದಿನ ಎಷ್ಟು ಮಂದಿ ಲೇವಿಯರು ಸೇವೆಮಾಡಬೇಕೆಂಬುದನ್ನು ಮೊದಲೇ ಗೊತ್ತುಪಡಿಸಲಾಗಿತ್ತು.


ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಧಿಶರಾಗಿ ಯಾಜಕರು ಸೇವೆಮಾಡಬೇಕು ಮತ್ತು ನನ್ನ ಆಡಳಿತವನ್ನು ಆಧರಿಸಿ ಅವರು ತೀರ್ಪು ನೀಡಬೇಕು. ಅವರು ವಿಶೇಷವಾದ ಕೂಟಗಳನ್ನು ಏರ್ಪಡಿಸುವಾಗ ನನ್ನ ವಿಧಿನಿಯಮಗಳನ್ನು ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನ್ನು ಮತ್ತು ಸಬ್ಬತ್ ದಿನಗಳನ್ನು ಅವರು ಗೌರವಿಸುವರು.


ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.


ಇದಾದ ಬಳಿಕ ಅವರು ನಿತ್ಯ ಸರ್ವಾಂಗಹೋಮವನ್ನೂ ಅಮಾವಾಸ್ಯೆ ಮತ್ತು ಇತರ ಹಬ್ಬದ ದಿನಗಳಲ್ಲಿ ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಬೇಕಾದ ಯಜ್ಞಹೋಮಗಳನ್ನೂ ಸಮರ್ಪಿಸಿದರು. ಜನರು ತಾವು ಯೆಹೋವನಿಗೆ ಕೊಡಬೇಕೆಂದಿದ್ದ ಇತರ ಕಾಣಿಕೆಗಳನ್ನು ಸಹ ತಂದು ಕೊಡಲಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು