ಯಾಜಕಕಾಂಡ 23:21 - ಪರಿಶುದ್ದ ಬೈಬಲ್21 ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂದು ಪ್ರಕಟಿಸಬೇಕು. ಅಂದು ಯಾವ ದುಡಿಮೆಯನ್ನು ಕೈಗೊಳ್ಳಬಾರದು. ನೀವು ಎಲ್ಲೇ ಇರಲಿ ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆ ಕೂಡಬೇಕೆಂಬದಾಗಿ ಪ್ರಸಿದ್ಧಪಡಿಸಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿ |
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.