ಯಾಜಕಕಾಂಡ 23:22 - ಪರಿಶುದ್ದ ಬೈಬಲ್22 “ಅಲ್ಲದೆ ನಿಮ್ಮ ದೇಶದಲ್ಲಿ ಪೈರುಗಳನ್ನು ಕೊಯ್ಯುವಾಗ ಹೊಲದ ಮೂಲೆಗಳವರೆಗೆ ಇರುವುದನ್ನೆಲ್ಲಾ ಕೊಯ್ಯಬೇಡಿರಿ. ನೆಲದ ಮೇಲೆ ಬೀಳುವ ಧಾನ್ಯಗಳನ್ನು ಹಕ್ಕಲಾಯಬಾರದು. ಬಡವರಿಗಾಗಿಯೂ ನಿಮ್ಮ ದೇಶದ ಮೂಲಕ ಪ್ರಯಾಣಮಾಡುವ ಪರದೇಶಸ್ಥರಿಗಾಗಿಯೂ ಅವುಗಳನ್ನು ಬಿಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಿಮ್ಮ ನಾಡಿನ ಹೊಲ ಕೊಯ್ಯುವಾಗ ಮೂಲೆ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು, ಹಕ್ಕಲನ್ನು ಆಯಬಾರದು, ಬಡವರಿಗಾಗಿ ಹಾಗು ಪರದೇಶಿಗಳಿಗಾಗಿ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವದನ್ನೆಲ್ಲಾ ಕೊಯ್ಯಬಾರದು, ಮತ್ತು ಹಕ್ಕಲಾಯಬಾರದು. ಇವನ್ನು ಬಡವರಿಗೋಸ್ಕರವೂ ಪರದೇಶದವರಿಗೋಸ್ಕರವೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ ‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” ಅಧ್ಯಾಯವನ್ನು ನೋಡಿ |