ಯಾಜಕಕಾಂಡ 23:24 - ಪರಿಶುದ್ದ ಬೈಬಲ್24 “ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಮೊದಲಿನ ದಿನವು ನಿಮಗೆ ವಿಶ್ರಾಂತಿಯ ವಿಶೇಷ ದಿನವಾಗಿರಬೇಕು. ಆಗ ನೀವು ಪವಿತ್ರಸಭೆಯಾಗಿ ಸೇರಬೇಕು. ಜ್ಞಾಪಕಮಾಡುವ ವಿಶೇಷ ಸಮಯಕ್ಕಾಗಿ ನೀವು ತುತ್ತೂರಿಯನ್ನು ಊದಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನೀನು ಏಳನೆಯ ತಿಂಗಳಿನ ಮೊದಲನೆಯ ದಿನ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು. ಅಧ್ಯಾಯವನ್ನು ನೋಡಿ |
ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.