Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:27 - ಪರಿಶುದ್ದ ಬೈಬಲ್‌

27 “ಏಳನೆಯ ತಿಂಗಳಿನ ಹತ್ತನೆಯ ದಿನವು ದೋಷಪರಿಹಾರಕ ದಿನವಾಗಿರುವುದು. ಆಗ ಪವಿತ್ರ ಸಭೆಯಾಗಿ ಸೇರಬೇಕು. ನೀವು ಆಹಾರವನ್ನು ತಿನ್ನಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಕಾಣಿಕೆಯನ್ನು ಸಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವು ಸರ್ವದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು, ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:27
19 ತಿಳಿವುಗಳ ಹೋಲಿಕೆ  

“ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”


ಅವನು ತನ್ನ ಶರೀರವನ್ನು ಪವಿತ್ರಸ್ಥಳದಲ್ಲಿ ನೀರಿನಿಂದ ತೊಳೆದುಕೊಳ್ಳುವನು. ಬಳಿಕ ಅವನು ತನ್ನ ಇತರ ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳುವನು. ಅವನು ಹೊರಗೆ ಬಂದು, ತನ್ನ ಸರ್ವಾಂಗಹೋಮವನ್ನು ಮತ್ತು ಜನರ ಸರ್ವಾಂಗಹೋಮವನ್ನು ಅರ್ಪಿಸುವನು. ಅವನು ತನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು.


“ಬಳಿಕ ಆರೋನನು ಜನರಿಗೋಸ್ಕರವಾಗಿರುವ ಪಾಪಪರಿಹಾರಕ ಪಶುವಾದ ಹೋತವನ್ನು ವಧಿಸಬೇಕು. ಆರೋನನು ಈ ಹೋತದ ರಕ್ತವನ್ನು ತೆರೆಯ ಹಿಂಭಾಗದಲ್ಲಿರುವ ಕೋಣೆಗೆ ತೆಗೆದುಕೊಂಡು ಬರಬೇಕು. ಆರೋನನು ಹೋರಿಯ ರಕ್ತದಿಂದ ಮಾಡಿದಂತೆ ಹೋತದ ರಕ್ತದಿಂದಲೂ ಮಾಡಬೇಕು. ಆರೋನನು ಹೋತದ ರಕ್ತವನ್ನು ಕೃಪಾಸನದ ಮೇಲೂ ಮತ್ತು ಕೃಪಾಸನದ ಮುಂಭಾಗದಲ್ಲಿಯೂ ಚಿಮಿಕಿಸಬೇಕು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?


ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.


ದೋಷಪರಿಹಾರಕ ದಿನದಲ್ಲಿ ಅಂದರೆ ಐವತ್ತನೆಯ ವರ್ಷದ ಏಳನೆಯ ತಿಂಗಳ ಹತ್ತನೆಯ ದಿನದಲ್ಲಿ ದೇಶದಲ್ಲೆಲ್ಲಾ ಕೊಂಬನ್ನೂದಿಸಬೇಕು.


“ಬಳಿಕ ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ಅರ್ಪಿಸುವನು. ಆರೋನನು ತನಗಾಗಿಯೂ ತನ್ನ ಕುಟುಂಬದವರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು. ಆರೋನನು ಹೋರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ವಧಿಸುವನು.


ದುಃಖಪಡಿರಿ, ಗೋಳಾಡಿರಿ, ಕಣ್ಣೀರಿಡಿರಿ! ನಗುವುದನ್ನು ಬಿಟ್ಟು ಗೋಳಾಡಿರಿ. ಸಂತೋಷಿಸುವುದನ್ನು ಬಿಟ್ಟು ವ್ಯಸನಪಡಿರಿ.


ಅವರು ಅಸ್ವಸ್ಥರಾಗಿದ್ದಾಗ ನಾನು ದುಃಖಪಟ್ಟೆನು; ಉಪವಾಸ ಮಾಡಿದೆನು. ನಾನು ಅವರಿಗೋಸ್ಕರ ಪ್ರಾರ್ಥಿಸಿದ್ದಕ್ಕೆ ಇದು ನನಗೆ ಪ್ರತಿಫಲವೇ?


ಆದರೆ ನಾವು ಬಹಳ ಸಮಯವನ್ನು ಕಳೆದುಕೊಂಡಿದ್ದೆವು. ಈಗ ನೌಕಾಯಾನ ಮಾಡುವುದು ಅಪಾಯಕರವಾಗಿತ್ತು. ಯಾಕೆಂದರೆ ಯೆಹೂದ್ಯರ ಉಪವಾಸ ದಿನ ಆಗಲೇ ಕಳೆದಿತ್ತು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.


ಆರೋನನು ಮಹಾ ಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ, ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನಗುಡಾರಕ್ಕೂ ಅವನು ಇದನ್ನೇ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು