ಯಾಜಕಕಾಂಡ 23:28 - ಪರಿಶುದ್ದ ಬೈಬಲ್28 ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅ ದಿನದಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಅದು ದೋಷಪರಿಹಾರಕ ದಿನ. ಅಂದು ನಿಮ್ಮ ಪರವಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಅದು ದೋಷಪರಿಹಾರಕ ದಿವಸ; ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕಾಚಾರವು ನಡೆಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.