Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:30 - ಪರಿಶುದ್ದ ಬೈಬಲ್‌

30 ಈ ದಿನದಲ್ಲಿ ಕೆಲಸಮಾಡುವವನನ್ನು ಇಸ್ರೇಲರೊಂದಿಗೆ ಇರದಂತೆ ನಾಶಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಾವನಾದರು ಆ ದಿನ ಕಿಂಚಿತ್ತಾದರು ದುಡಿದರೆ ಅವನನ್ನು ಇಸ್ರಯೇಲರಿಂದ ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಸ್ವಲ್ಪವಾಗಿ ನಡಿಸಿದರೂ ಅವನನ್ನು ಇಸ್ರಾಯೇಲ್ಯರಲ್ಲಿ ಇರದಂತೆ ನಾಶ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದೇ ದಿವಸದಲ್ಲಿ ಯಾರಾದರೂ ಕೆಲಸವನ್ನು ಮಾಡಿದರೆ, ಅವರನ್ನು ನಾನು ಅವರ ಜನರ ಮಧ್ಯದಿಂದ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:30
9 ತಿಳಿವುಗಳ ಹೋಲಿಕೆ  

ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.


ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ.


ಫಿಲಿಷ್ಟಿಯ ಜನರೇ, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರೇ, ಯೆಹೋವನಿಂದ ಬಂದ ಸಂದೇಶ ನಿಮಗಾಗಿಯೇ. ಕಾನಾನ್ ದೇಶವೇ, ಪಾಲೆಸ್ತೀನ್ ದೇಶವೇ, ನೀವು ನಾಶಗೊಳ್ಳುವಿರಿ. ನಿಮ್ಮಲ್ಲಿ ಯಾರೂ ವಾಸಿಸರು.


ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು.


ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. ನನ್ನ ಜನರು ಬದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.


“ಈ ದಿನದಲ್ಲಿ ಯಾವನಾದರೂ ಉಪವಾಸ ಮಾಡದಿದ್ದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು.


ನೀವು ಅಂದು ಯಾವ ಕೆಲಸವನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ ಈ ಕಟ್ಟಳೆ ನಿಮಗೆ ಶಾಶ್ವತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು