ಯಾಜಕಕಾಂಡ 23:32 - ಪರಿಶುದ್ದ ಬೈಬಲ್32 ಅದು ನಿಮಗಾಗಿ ವಿಶ್ರಾಂತಿಯ ವಿಶೇಷ ದಿನವಾಗಿರುವುದು. ನೀವು ಆಹಾರವನ್ನು ತಿನ್ನಬಾರದು. ತಿಂಗಳಿನ ಒಂಭತ್ತನೆಯ ದಿನದ ನಂತರ ಸಾಯಂಕಾಲದಲ್ಲಿ ಈ ವಿಶ್ರಾಂತಿಯ ವಿಶೇಷ ದಿನವನ್ನು ಪ್ರಾರಂಭಿಸುವಿರಿ. ಈ ವಿಶ್ರಾಂತಿಯ ವಿಶೇಷ ದಿನವು ಆ ಸಾಯಂಕಾಲದಿಂದ ಹಿಡಿದು ಮರುದಿನ ಸಾಯಂಕಾಲದವರೆಗೆ ಮುಂದುವರಿಯುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿದಿನವಾಗಿರಬೇಕು. ಅಂದು ಉಪವಾಸದಿಂದಿರಬೇಕು. ಆ ತಿಂಗಳಿನ ಒಂಬತ್ತನೆಯ ದಿನದ ಸಂಜೆ ಪ್ರಾರಂಭಿಸಿ ಮರುದಿನದ ಸಂಜೆಯವರೆಗೆ ನೀವು ಆ ವಿರಾಮ ದಿನವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿ ದಿನವಾಗಿರಬೇಕು. ಅದರಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ. ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.