ಯಾಜಕಕಾಂಡ 23:37 - ಪರಿಶುದ್ದ ಬೈಬಲ್37 “ಯೆಹೋವನಿಗೆ ವಿಶೇಷ ಹಬ್ಬದ ದಿನಗಳು ಇವುಗಳೇ. ಈ ವಿಶೇಷ ದಿನಗಳಲ್ಲಿ ನೀವು ಪವಿತ್ರಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾಗುವ ಸರ್ವಾಂಗಹೋಮ, ಧಾನ್ಯಸಮರ್ಪಣೆ, ಯಜ್ಞಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಬೇಕು. ನೀವು ಆ ಕಾಣಿಕೆಗಳನ್ನು ಸರಿಯಾದ ಸಮಯದಲ್ಲಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 “‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 “ಸರ್ವೇಶ್ವರ ನೇಮಿಸಿರುವ ಸಬ್ಬತ್ ದಿನಗಳನ್ನು ಮತ್ತು ಮೇಲೆ ಹೇಳಿದ ಸ್ವಾಮಿಯ ಹಬ್ಬದ ದಿನಗಳನ್ನು ನೀವು ಆಚರಿಸಬೇಕು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ಜನರಿಗೆ ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಯೆಹೋವನು ನೇವಿುಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಕಂಡವುಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಕೂಡುವಂತೆ ನೀವು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ ‘ನೀವು ಪರಿಶುದ್ಧ ಸಭೆಯಾಗಿ ಯೆಹೋವ ದೇವರ ನೇಮಕವಾದ ಹಬ್ಬಗಳು ಇವೇ. ಇವುಗಳ ಒಂದೊಂದು ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ, ಯಜ್ಞವನ್ನೂ, ಪಾನದ್ರವ್ಯ ಬಲಿಗಳನ್ನೂ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.