ಯಾಜಕಕಾಂಡ 23:39 - ಪರಿಶುದ್ದ ಬೈಬಲ್39 “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ಪೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದನಂತರ ಯೆಹೋವನು ನೇವಿುಸಿದ [ಪರ್ಣಶಾಲೆಗಳ] ಜಾತ್ರೆಯನ್ನು ಏಳು ದಿನಗಳವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನೂ ಮಾಡದೆ ಸಂಪೂರ್ಣವಿರಾಮದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು. ಅಧ್ಯಾಯವನ್ನು ನೋಡಿ |
ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.