Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:4 - ಪರಿಶುದ್ದ ಬೈಬಲ್‌

4 “ಇವುಗಳು ಯೆಹೋವನಿಂದ ಆರಿಸಲ್ಪಟ್ಟ ಹಬ್ಬದ ದಿನಗಳು. ಆ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಟಗಳು ನಡೆಸಲ್ಪಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರನಿಂದ ನೇಮಕವಾದ ಹಬ್ಬದ ಕಾಲಗಳಲ್ಲಿ ದೇವರ ಆರಾಧನೆಗಾಗಿ ಸಭೆಸೇರಬೇಕು. ಆ ಹಬ್ಬದ ದಿನಗಳನ್ನು ನಿಯಮಿತ ಕಾಲದಲ್ಲಿ ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಸಿದ್ಧಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:4
9 ತಿಳಿವುಗಳ ಹೋಲಿಕೆ  

“ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು.


“ಪ್ರತಿವರ್ಷ ನೀವು ಮೂರುಜಾತ್ರೆಗಳನ್ನು ಮಾಡಬೇಕು.


“ಯೆಹೋವನಿಗೆ ವಿಶೇಷ ಹಬ್ಬದ ದಿನಗಳು ಇವುಗಳೇ. ಈ ವಿಶೇಷ ದಿನಗಳಲ್ಲಿ ನೀವು ಪವಿತ್ರಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾಗುವ ಸರ್ವಾಂಗಹೋಮ, ಧಾನ್ಯಸಮರ್ಪಣೆ, ಯಜ್ಞಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಬೇಕು. ನೀವು ಆ ಕಾಣಿಕೆಗಳನ್ನು ಸರಿಯಾದ ಸಮಯದಲ್ಲಿ ಅರ್ಪಿಸಬೇಕು.


“ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.


ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.


ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಧಿಶರಾಗಿ ಯಾಜಕರು ಸೇವೆಮಾಡಬೇಕು ಮತ್ತು ನನ್ನ ಆಡಳಿತವನ್ನು ಆಧರಿಸಿ ಅವರು ತೀರ್ಪು ನೀಡಬೇಕು. ಅವರು ವಿಶೇಷವಾದ ಕೂಟಗಳನ್ನು ಏರ್ಪಡಿಸುವಾಗ ನನ್ನ ವಿಧಿನಿಯಮಗಳನ್ನು ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನ್ನು ಮತ್ತು ಸಬ್ಬತ್ ದಿನಗಳನ್ನು ಅವರು ಗೌರವಿಸುವರು.


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


ದೇವರು ಹೇಳುವುದೇನೆಂದರೆ, “ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳೆಯಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿ ವರ್ಷವೂ ನಡೆಯುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು