Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:40 - ಪರಿಶುದ್ದ ಬೈಬಲ್‌

40 ಪ್ರಥಮ ದಿನದಲ್ಲಿ ನೀವು ಮರಗಳಿಂದ ಉತ್ತಮ ಹಣ್ಣುಗಳನ್ನೂ ಖರ್ಜೂರಮರದ ಗರಿಗಳನ್ನೂ ಎಲೆತುಂಬಿದ ಕೊಂಬೆಗಳನ್ನೂ ವಿಲೋಸಸ್ಯಗಳನ್ನೂ ತೆಗೆದುಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈ ಹಬ್ಬದ ದಿನವನ್ನು ಏಳು ದಿನಗಳವರೆಗೆ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಮೊದಲನೆಯ ದಿನದಲ್ಲಿ ಶ್ರೇಷ್ಠ ವೃಕ್ಷದ ಹಣ್ಣುಗಳನ್ನೂ ಖರ್ಜೂರ ಮರದ ಗರಿಗಳನ್ನೂ ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನೂ ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನೂ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳು ಸಂಭ್ರಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:40
19 ತಿಳಿವುಗಳ ಹೋಲಿಕೆ  

ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಇಷ್ಟು ಮಾತ್ರವಲ್ಲದೆ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಾವು ದೇವರಲ್ಲಿ ಹರ್ಷಿಸುತ್ತೇವೆ. ಈಗ ನಾವು ದೇವರ ಸ್ನೇಹಿತರಾಗಿರುವುದು ಯೇಸುವಿನಿಂದಲೇ.


ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.


ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು. “ಆತನಿಗೆ ಸ್ತೋತ್ರವಾಗಲಿ! ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ!’ ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!” ಎಂದು ಜನರು ಕೂಗಿದರು.


ಆಗ ಯೇಸು ಕುಳಿತುಕೊಂಡು ಜೆರುಸಲೇಮಿಗೆ ಹೋದನು. ಅನೇಕ ಜನರು ತಮ್ಮ ಮೇಲಂಗಿಗಳನ್ನು ಯೇಸುವಿಗಾಗಿ ದಾರಿಯ ಮೇಲೆ ಹಾಸಿದರು. ಕೆಲವರು ಮರಗಳಿಂದ ಚಿಗುರುಗಳನ್ನು ಕತ್ತರಿಸಿಕೊಂಡು ಬಂದು ದಾರಿಯ ಮೇಲೆ ಹರಡಿದರು.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ಜೆರುಸಲೇಮೇ, ಹರ್ಷಿಸು. ಜೆರುಸಲೇಮನ್ನು ಪ್ರೀತಿಸುವ ಜನರೇ, ಹರ್ಷಿಸಿರಿ. ಜೆರುಸಲೇಮಿಗೆ ದುಃಖಕೊಡುವ ವಿಷಯಗಳು ಜರುಗಿದ್ದರಿಂದ ನೀವು ದುಃಖಪಡುತ್ತಿದ್ದೀರಿ. ಆದರೆ ನೀವೀಗ ಸಂತೋಷಪಡಬೇಕು.


ನೀತಿವಂತರಾದರೋ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು.


“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ಪೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು.


ನೀವು ಪ್ರತಿ ವರ್ಷ ಏಳು ದಿನಗಳವರೆಗೆ ಈ ಹಬ್ಬದ ದಿನವನ್ನು ಆಚರಿಸಬೇಕು. ಈ ನಿಯಮ ಶಾಶ್ವತವಾಗಿದೆ. ಏಳನೆಯ ತಿಂಗಳಲ್ಲಿ ಈ ಹಬ್ಬದ ದಿನವನ್ನು ನೀವು ಆಚರಿಸಬೇಕು.


ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್‌ವಾದ್ಯಗಳನ್ನು ತೂಗುಹಾಕಿದೆವು.


ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು.


ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು