ಯಾಜಕಕಾಂಡ 23:6 - ಪರಿಶುದ್ದ ಬೈಬಲ್6 “ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಂದು ಮೊದಲ್ಗೊಂಡು ಏಳು ದಿನಗಳಲ್ಲೂ ಹುಳಿರಹಿತ ರೊಟ್ಟಿಯನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿ |
ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.
ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.