Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:10 - ಪರಿಶುದ್ದ ಬೈಬಲ್‌

10 ಇಸ್ರೇಲಿನ ಒಬ್ಬ ಸ್ತ್ರೀಗೆ ಒಬ್ಬ ಮಗನಿದ್ದನು. ಅವನ ತಂದೆ ಈಜಿಪ್ಟಿನವನು. ಪಾಳೆಯದಲ್ಲಿದ್ದ ಇಸ್ರೇಲರ ಮಧ್ಯದಿಂದ ಅವನು ಹೊರಬಂದನು. ಅವನು ಒಬ್ಬ ಇಸ್ರೇಲನೊಡನೆ ಜಗಳವಾಡತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲ್ ಸ್ತ್ರೀಯಲ್ಲಿ ಐಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಇಸ್ರಾಯೇಲರ ಪಾಳೆಯದಲ್ಲಿ, ಇಸ್ರಾಯೇಲನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲ್ ಮಹಿಳೆಯೊಬ್ಬಳಿಗೆ ಈಜಿಪ್ಟಿನ ಪುರುಷನಿಂದ ಹುಟ್ಟಿದ ಒಬ್ಬ ವ್ಯಕ್ತಿ ಇದ್ದನು. ಇವನು ಇಸ್ರಯೇಲರ ಪಾಳೆಯಕ್ಕೆ ಬಂದು ಇಸ್ರಯೇಲನೊಬ್ಬನ ಸಂಗಡ ಜಗಳವಾಡಿ, ಬೈದುದು ಮಾತ್ರವಲ್ಲದೆ ಸರ್ವೇಶ್ವರ ಸ್ವಾಮಿಯನ್ನು ದೂಷಿಸಿ ಶಾಪ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ ಸ್ತ್ರೀಯಲ್ಲಿ ಐಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಬಂದು ಇಸ್ರಾಯೇಲ್ಯರ ಪಾಳೆಯದಲ್ಲಿ ಇಸ್ರಾಯೇಲ್ಯನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬೈದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ, ಈಜಿಪ್ಟಿನವನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲರ ಪಾಳ್ಯಕ್ಕೆ ಬಂದನು. ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಜಗಳವಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:10
4 ತಿಳಿವುಗಳ ಹೋಲಿಕೆ  

ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ?


ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು.


ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.”


ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯನ ಮಗಳು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು